ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಅಂದರೆ ಬಿಗ್‌ಬಾಸ್. ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದರು. ಇದೀಗ ಬಿಗ್‌ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಲರ್ಸ್ ಕನ್ನಡದಲ್ಲಿ ಕೆಲ ಕಾರ್ಯಕ್ರಮ, ಸೀರಿಯಲ್‌ಗಳು ಮಕ್ತಾಯದ ಹಂತ ತಲುಪಿವೆ. ಕಳೆದ ವರ್ಷದಂತೆ ಈ ವರ್ಷವೂ ಅಕ್ಟೋಬರ್ ತಿಂಗಳಲ್ಲಿ ಬಿಗ್‌ಬಾಸ್ ಆರಂಭವಾಗುವ ನಿರೀಕ್ಷೆಯಿದ್ದು, ಎಂದಿನಂತೆ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.