ಚಲನಚಿತ್ರಗಳ ಒಳನೋಟ
ಸಾಧಕರ ಸಾಧನೆಯ ಹಾದಿಯ ಬಗ್ಗೆ ಪ್ರೇಕ್ಷಕರ ಮುಂದಿಟ್ಟು, ಯುವಜನತೆಗೆ ಸ್ಫೂರ್ತಿ ತುಂಬುತ್ತಿದ್ದ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್. ಎವರ್ ಗ್ರೀನ್ ಹೀರೋ ರಮೇಶ್ ಅರವಿಂದ್ ಅವರು ನಡೆಸಿಕೊಡುವ ಈ ಕಾರ್ಯಕ್ರಮ ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿರುತ್ತಾರೆ. ರಮೇಶ್ ಅರವಿಂದ್ ಅವರ ಕನ್ನಡ ಭಾಷೆಯ ಮೇಲಿನ ಹಿಡಿತ, ಅವರು ಹೋಸ್ಟ್ ಮಾಡುವ ರೀತಿ ಎಲ್ಲದಕ್ಕೂ ಒಂದು ಅಭಿಮಾನಿ ವರ್ಗವೇ ಇದೆ. ಇಷ್ಟು ಫೇಮಸ್ ಆಗಿದ್ದ ಶೋ ಕಳೆದ ಮೂರು ವರ್ಷಗಳಿಂದ ಪ್ರಸಾರವಾಗಿಲ್ಲ. ಇದು ವೀಕ್ಷಕರ ಬೇಸರಕ್ಕೆ ಕಾರಣವಾಗಿತ್ತು. ಇದೀಗ ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮತ್ತೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ಬಾರಿ ಕೂಡ ರಮೇಶ್ ಅವರೇ ಸಾಧಕರ ಪರಿಚಯವನ್ನು ಪ್ರೇಕ್ಷಕರಿಗೆ ಮಾಡಿಸಲಿದ್ದಾರೆ.ಶೀಘ್ರದಲ್ಲೇ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ವೀಕ್ಷಕರು ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮಕ್ಕೆ ಇವರನ್ನೆಲ್ಲ ಕರೆಸಬೇಕು ಎಂಬ ದೊಡ್ಡ ಪಟ್ಟಿಯನ್ನೇ ಇಟ್ಟಿದ್ದಾರೆ. ಅವರು ಯಾರು ಎಂಬ ಮಾಹಿತಿ ಇಲ್ಲಿದೆ.