»   » 'ಸುವರ್ಣ'ದಲ್ಲಿ ಸೂಪರ್ ಸ್ಟಾರ್ ಆಫ್ ಕರ್ನಾಟಕ

'ಸುವರ್ಣ'ದಲ್ಲಿ ಸೂಪರ್ ಸ್ಟಾರ್ ಆಫ್ ಕರ್ನಾಟಕ

Subscribe to Filmibeat Kannada

ಸುವರ್ಣ ವಾಹಿನಿಯಲ್ಲಿ 'ಸೂಪರ್ ಸ್ಟಾರ್ ಆಫ್ ಕರ್ನಾಟಕ' ಎಂಬ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ತೀರ್ಪುಗಾರರಾಗಿ ಡೈನಮಿಕ್ ಸ್ಟಾರ್ ದೇವರಾಜ್ ಹಾಗೂ ಮೋಹಕ ನಟಿ ಪ್ರಿಯಾಂಕಾ ಉಪೇಂದ್ರ ಕಾಣಿಸಲಿದ್ದಾರೆ.

ನೃತ್ಯ ಪ್ರತಿಭೆಗಳನ್ನು ಬೆಳಕಿಗೆ ತರುವ 'ಸೈ' ಕಾರ್ಯಕ್ರಮ ಯಶಸ್ವಿಯಾದ ಬಳಿಕ 'ಸೂಪರ್ ಸ್ಟಾರ್ ಆಫ್ ಕರ್ನಾಟಕ' ಕಾರ್ಯಕ್ರಮವನ್ನು ಸುವರ್ಣ ವಾಹಿನಿ ಆರಂಭಿಸುತ್ತಿದೆ. ಈ ಕಾರ್ಯಕ್ರಮ ಡಿಸೆಂಬರ್ 12ರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ತೀರ್ಪುಗಾರರಾದ ಪ್ರಿಯಾಂಕ ಉಪೇಂದ್ರ ಮತ್ತು ದೇವರಾಜ್ ಅವರು 'ಸೂಪರ್ ಸ್ಟಾರ್ ಆಫ್ ಕರ್ನಾಟಕ'ವನ್ನು ಆಯ್ಕೆ ಮಾಡಲಿದ್ದಾರೆ.

ಇದೊಂದು ರಿಯಾಲಿಟಿ ಕಾರ್ಯಕ್ರಮವಾಗಿದ್ದು ಭಾಗವಹಿಸುವವರಿಗೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಅತ್ಯದ್ಭುತ ಪ್ರತಿಭೆ ತೋರುವ ಸ್ಪರ್ಧಾಳುಗಳ ಕೊರಳಿಗೆ 'ಸೂಪರ್ ಸ್ಟಾರ್ ಆಫ್ ಕರ್ನಾಟಕ' ಮಾಲೆ ಬೀಳಲಿದೆ. ಈಗಾಗಲೇ ಸಾವಿರಾರು ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಈ ರೀತಿಯ ರಿಯಾಲಿಟಿ ಶೋ ಆರಂಭವಾಗುತ್ತಿರುವುದು ಇದೇ ಮೊದಲು ಎನ್ನುತ್ತಾರೆ ಕಾರ್ಯಕ್ರಮದ ಮುಖ್ಯಸ್ಥ ರಾಘವೇಂದ್ರ. ಸೃಜನ್ ಲೋಕೇಶ್ ಮತ್ತು ಸುಷ್ಮಾ ಕಾರ್ಯಕ್ರಮದ ನಿರೂಪಕರು. ವಾರದಲ್ಲಿ ಎರಡು ದಿನಗಳ ಕಾಲ ಶನಿವಾರ ಮತ್ತು ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada