For Quick Alerts
  ALLOW NOTIFICATIONS  
  For Daily Alerts

  ಹಳ್ಳಿಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸುತ್ತಿರುವ ನಟ ಹರೀಶ್

  |

  ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ಹಲವರು ಹಲವು ಬಗೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕಿರುತೆರೆ ನಟರೂ ಸಹ ತಮ್ಮ ಕೈಲಾದ ಮಟ್ಟಿಗೆ ಸೇವೆಯಲ್ಲಿ ನಿರತರಾಗಿದ್ದಾರೆ.

  'ಮಂಗಳ ಗೌರಿ', 'ಪುಟ್ಟಗೌರಿ ಮದುವೆ', 'ಅರಮನೆ' ಧಾರಾವಾಹಿಗಳಲ್ಲಿ ನಟಿಸಿರುವ ಸಿಜಿ ಹರೀಶ್ ಗೌಡ ಅವರು ಮಾಲೂರು ಸಮೀಪದ ಹಳ್ಳಿಗಳಿಗೆ ತೆರಳಿ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯ ಮಾಡುತ್ತಿದ್ದಾರೆ.

  ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹರೀಶ್, 'ಮಾಲೂರು ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಕ್ಕೂರು ಹೋಬಳಿಯ ಲಕ್ಕೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಲಕ್ಕೂರು ಗ್ರಾಮದ 1.2.3.4. ಬ್ಲಾಕ್ ಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತುಸ್ಯಾನಿಟೈಸರ್ ಸಿಂಪಡನೆ ಮಾಡಲಾಯಿತು ಹಾಗೂ ಜನರಿಗೆ ಮಾಸ್ಕ್ ಧರಿಸಿ ಮನೆಯಲ್ಲಿ ಸುರಕ್ಷಿತವಾಗಿರಿ ಯೆಂದು ಅರಿವು ಮೂಡಿಸಲಾಯಿತು' ಎಂದಿದ್ದಾರೆ.

  ಹರೀಶ್, ತಮ್ಮದೇ ಆದ ತಂಡವೊಂದನ್ನು ಕಟ್ಟಿಕೊಂಡು ಹಳ್ಳಿಗಳಿಗೆ ತೆರಳಿ ಬೀದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡುತ್ತಿದ್ದಾರೆ.

  ಹಳ್ಳಿಗಳಲ್ಲಿ ಕೊರೊನಾ ಬಗ್ಗೆ ಜಾಗೃತೆ ಕಡಿಮೆ ಇದೆ. ಹೀಗಾಗಿ ಕೊರೊನಾ ಪಾಸಿಟಿವ್ ಬಂದವರಿಗೆ ಕೊರೊನಾ ಸೆಂಟರ್‌ಗಳಿಗೆ ಹೋಗಿ ಚಿಕಿತ್ಸೆ ಪಡೆಯಿರಿ ಎಂದು ಅರಿವು ಮೂಡಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರಿಗೆ ಫುಡ್ ಕಿಟ್, ಮಾಸ್ಕ್, ಫೇಸ್‌ಶೀಲ್ಡ್ ವಿತರಣೆ ಮಾಡುತ್ತಿದ್ದೇವೆ. ಕೊರೊನಾ ವೈರಸ್ ರೋಗಿಗಳಿಗೂ ಕೂಡ ಚಿಕಿತ್ಸೆ ಪಡೆಯಲು ಸಹಾಯ ಮಾಡುತ್ತಿದ್ದೇವೆ" ಎಂದಿದ್ದಾರೆ ಹರೀಶ್.

  ಕವಿರಾಜ್, ನೀತು ಶೆಟ್ಟಿ, ಸಾಧು ಕೋಕಿಲ, ಉಪೇಂದ್ರ, ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಪ್ಪ ಇನ್ನೂ ಹಲವಾರು ಮಂದಿ ನಟ-ನಟಿಯರು ಕೊರೊನಾ ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಿನ ಹಸ್ತ ಚಾಚುತ್ತಿದ್ದಾರೆ.

  English summary
  Serial actor CG Harish Gowda spraying sanitizers in villages near Maluru. He said we are trying educate village people about COVID 19.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X