ಡಿಂಪಲ್ ಕ್ವೀನ್ ರಚಿತಾ ರಾಮ್‌ಗೆ ಸ್ವೀಟ್ ಶಾಕ್ ಕೊಟ್ಟ ದರ್ಶನ್

ನಟಿ ರಚಿತಾ ರಾಮ್ ಕನ್ನಡ ಚಿತ್ರರಂಗದಲ್ಲಿ 12 ವರ್ಷ ಪೂರೈಸಿದ್ದಾರೆ. ಇದೇ ವೇಳೆ ದರ್ಶನ್ ಕಡೆಯಿಂದ ಸರ್‌ಪ್ರೈಸ್ ಸಿಕ್ಕಿದೆ. 'ಬುಲ್ ಬುಲ್' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ರಚ್ಚು ಮುಂದೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಸುದೀಪ್, ಉಪೇಂದ್ರ, ಶಿವಣ್ಣ, ಪುನೀತ್ ಹೀಗೆ ಕನ್ನಡ ಚಿತ್ರರಂಗ ಸ್ಟಾರ್ ನಟರ ಜೊತೆಗೆಲ್ಲಾ ತೆರೆ ಹಂಚಿಕೊಂಡು ಕಮಾಲ್ ಮಾಡಿದರು.

2013, ಮೇ 10ರಂದು 'ಬುಲ್ ಬುಲ್' ಸಿನಿಮಾ ತೆರೆಗೆ ಬಂದಿತ್ತು. ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಎಂ. ಡಿ ಶ್ರೀಧರ್ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ವಿ. ಹರಿಕೃಷ್ಣ ಸಂಗೀತ 'ಬುಲ್ ಬುಲ್' ಚಿತ್ರದ ಹಾಡುಗಳಿಗೆ ಕವಿರಾಜ್ ಸಾಹಿತ್ಯ ಬರೆದಿದ್ದರು. ಚಿತ್ರದ ಆಲ್ಬಮ್ ಸೂಪರ್ ಹಿಟ್ ಆಗಿತ್ತು. ತೆಲುಗಿನ ಡಾರ್ಲಿಂಗ್ ಚಿತ್ರದ ರೀಮೆಕ್ ಇದ್ದಾಗಿತ್ತು. ಚಿತ್ರದ ನಾಯಕಿ ಪಾತ್ರಕ್ಕೆ ಖ್ಯಾತ ನಟಿಯರ ಹೆಸರು ಆಗ ಕೇಳಿಬಂದಿತ್ತು. ಅಚ್ಚರಿ ಎನ್ನುವಂತೆ ರಚಿತಾ ಆಯ್ಕೆ ಆಗಿದ್ದರು.

Actor Darshan shocks Rachita Ram in Bharjari Bachelors stage

'ಬೆಂಕಿಯಲ್ಲಿ ಅರಳಿದ ಹೂವು' ಹಾಗೂ 'ಅರಸಿ' ಕಿರುತೆರೆ ಧಾರಾವಾಹಿಗಳಲ್ಲಿ ರಚಿತಾ ರಾಮ್ ನಟಿಸಿದ್ದರು. 'ಬುಲ್ ಬುಲ್' ಚಿತ್ರಕ್ಕೆ ಆಡಿಷನ್ ಕೊಟ್ಟು ರಚಿತಾ ರಾಮ್ ನಾಯಕಿಯಾಗಿ ಆಯ್ಕೆ ಆಗಿದ್ದರು. ಮೊದಲ ಚಿತ್ರದಲ್ಲೇ ಪ್ರೇಕ್ಷಕರ ಮನಗೆದ್ದಿದ್ದರು. ದರ್ಶನ್ ಜೊತೆ ನಾಯಕಿಯಾಗಿ ನಟಿಸುವುದು ಮಾತ್ರವಲ್ಲ, ರೆಬಲ್ ಸ್ಟಾರ್ ಅಂಬರೀಶ್ ಜೊತೆಗೂ ತೆರೆ ಹಂಚಿಕೊಂಡಿದ್ದರು.

ಜೀ ಕನ್ನಡ 'ಭರ್ಜರಿ ಬ್ಯಾಚುಲರ್ಸ್' ವೇದಿಕೆಯಲ್ಲಿ ರಚಿತಾ ರಾಮ್‌ ಚಿತ್ರರಂಗದಲ್ಲಿ 12 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಲಾಗಿದೆ. ಸಿಂಹಾಸನದಲ್ಲಿ ಕೂರಿಸಿ ಕಿರೀಟ ತೊಡಿಸಿ ಸನ್ಮಾನಿಸಲಾಗಿದೆ. ಇದೇ ವೇಳೆ ನಟ ದರ್ಶನ್ ಆಡಿಯೋ ಸಂದೇಶದ ಮೂಲಕ ರಚಿತಾ ರಾಮ್‌ ಅವರಿಗೆ ಅಭಿನಂದನೆ ತಿಳಿಸಿ ಶುಭ ಕೋರಿದ್ದಾರೆ. ವೇದಿಕೆಯಲ್ಲಿ ಸರ್‌ಪ್ರೈಸ್ ಎನ್ನುವಂತೆ ಆಡಿಯೋ ಪ್ಲೇ ಮಾಡಿದ್ದು ದರ್ಶನ್ ಧ್ವನಿ ಕೇಳುತ್ತಿದ್ದಂತೆ ರಚ್ಚು ಶಾಕ್ ಆಗಿದ್ದಾರೆ.

ಈ ವಾರದ 'ಭರ್ಜರಿ ಬ್ಯಾಚುಲರ್ಸ್' ಕಾರ್ಯಕ್ರಮದ ಪ್ರೋಮೊ ಹೊರಬಂದಿದ್ದು ರಚಿತಾ ರಾಮ್ ಚಿತ್ರರಂಗದಲ್ಲಿ 12 ವರ್ಷ ಪೂರೈಸಿದ ಸಂಭ್ರಮಾರಣೆಯೇ ಹೈಲೆಟ್ ಆಗಿದೆ. ದರ್ಶನ್ ಹಾಗೂ ರಚಿತಾ ರಾಮ್ ಅವರದ್ದು ಕನ್ನಡದಲ್ಲಿ ಬೆಸ್ಟ್ ಆನ್‌ಸ್ಕ್ರೀನ್ ಪೇರ್ ಎನಿಸಿಕೊಂಡಿದೆ. ಇವರಿಬ್ಬರನ್ನು ಮತ್ತೆ ಒಟ್ಟಿಗೆ ತೆರೆಮೇಲೆ ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆರೋಪಿಯಾಗಿ ಜೈಲು ಸೇರಿದಾಗ ರಚಿತಾ ರಾಮ್ ಬೆಂಬಲಕ್ಕೆ ನಿಂತಿದ್ದರು. ಜೈಲಿಗೆ ಹೋಗಿ ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದರು. ಕಳೆದ ಆಗಸ್ಟ್ ತಿಂಗಳಿನಲ್ಲಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅದೇ ಸಮಯದಲ್ಲಿ ರಚಿತಾ ರಾಮ್ ಅಲ್ಲಿಗೆ ಭೇಟಿ ನೀಡಿದ್ದರು. ಪ್ರಕರಣದ ಬಗ್ಗೆ ರಚಿತಾ ರಾಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು. ಚಿತ್ರರಂಗಕ್ಕೆ ನನ್ನನ್ನು ಪರಿಚಯಿಸಿದ ದರ್ಶನ್ ಅವರು ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದ ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನಂಬಲು ಸ್ವಲ್ಪ ಕಷ್ಟ ಆಗುತ್ತಿದೆ" ಎಂದು ರಚಿತಾ ರಾಮ್ ಬರೆದುಕೊಂಡಿದ್ದರು.

ದರ್ಶನ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ಬಳಿಕ ವಿಡಿಯೋ ಮಾಡಿ ಮಾತನಾಡಿದ್ದರು. ಈ ವೇಳೆ ಕಷ್ಟದ ಸಮಯದಲ್ಲಿ ತಮ್ಮ ಬೆಂಬಲಕ್ಕೆ ನಿಂತಿದ್ದ ರಚಿತಾ ರಾಮ್, ರಕ್ಷಿತಾ ಪ್ರೇಮ್ ಹಾಗೂ ಧನ್ವೀರ್ ಗೌಡಗೆ ಧನ್ಯವಾದ ತಿಳಿಸಿದ್ದರು. ಆ ಬಳಿಕ ಇದೀಗ ರಚಿತಾ ರಾಮ್ ಚಿತ್ರರಂಗದಲ್ಲಿ 12 ವರ್ಷ ಪೂರೈಸಿದ್ದಕ್ಕೆ ಅಭಿನಂದನೆ ತಿಳಿಸಿದ್ದಾರೆ.

More from Filmibeat

English summary
Rachita Ram completes successful 12 years in the industry. surprise celebration on Bharjari Bachelors stage;
Read more about: darshan rachita ram sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X