ಆಸ್ಪತ್ರೆಯಲ್ಲಿ ಕಾಮಿಡಿ ಕಿಲಾಡಿ ಗೋವಿಂದೇಗೌಡ: ಆರೋಗ್ಯದ ಬಗ್ಗೆ ಅಪ್ ಡೇಟ್ ನೀಡಿದ ಜಗ್ಗೇಶ್
ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತಿಗಳಿಸಿದ್ದ ನಟ ಗೋವಿಂದೇಗೌಡಗೆ ಅಪಘಾತವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರೀಕರಣ ವೇಳೆ ಅಪಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದೆ. ಈ ಬಗ್ಗೆ ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಕಿರುತೆರೆಯಲ್ಲಿ ಜಿಜಿ ಎಂದೇ ಖ್ಯಾತಿಗಳಿದ್ದ ಗೋವಿಂದೇಗೌಡ ಅವರಿಗೆ ಅಪಘಾತದವಾದ ಸುದ್ದಿ ಅವರ ಅಭಿಮಾನಿಗಳಲ್ಲಿ ಮತ್ತು ಸ್ನೇಹಿತರಲ್ಲಿ ಆತಂಕ ಮೂಡಿಸಿದೆ. ಇದೀಗ ನಟ ಜಗ್ಗೇಶ್ ಜಿಜಿ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಜೊತೆ ಆಸ್ಪತ್ರೆಗೆ ತೆರಳಿದ್ದ ಜಗ್ಗೇಶ್ ಗೋವಿಂದೇಗೌಡರನ್ನು ಭೇಟಿಯಾಗಿ ಮಾತನಾಡಿಸಿದ್ದಾರೆ.
"ಈಗ ತಾನೆ ಗೋವಿಂದೇಗೌಡನನ್ನ ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ" ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಹಾಸ್ಯದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಗೋವಿಂದೇಗೌಡ ಆಸ್ಪತ್ರೆ ಸೇರಿರುವುದು ಪ್ರೇಕ್ಷಕರಲ್ಲೂ ಆತಂಕ ಮೂಡಿದೆ. ಜಿಜಿ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಗೋವಿಂದೇಗೌಡಗೆ ಅಪಘಾತವಾದ ವಿಚಾರವನ್ನು ನಟ ಜಗ್ಗೇಶ್ ಟ್ವೀಟ್ ಮಾಡಿರುವ ಬಹಿರಂಗ ಪಡಿಸಿದ್ದರು. ''ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ'' ಎಂದು ಹೇಳಿದ್ದರು.
ಕಾಮಿಡಿ ಕಿಲಾಡಿಗಳು ಶೋ ಮೂಲಕ ಬೆಳಕಿಗೆ ಬಂದ ಪ್ರತಿಭೆ ಗೋವಿಂದೇಗೌಡ, ಕೆಜಿಎಫ್ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಸಹ ನಟಿಸಿದ್ದರು. ಇತ್ತೀಚೆಗೆ ರಾಷ್ಟ್ರಪ್ರಶಸ್ತಿಗೆ ಭಾಜವಾದ ಸಿನಿಮಾ 'ಅಕ್ಷಿ'ಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಕನ್ನಡದ ಐದು ಪ್ರಮುಖ ನಿರ್ದೇಶಕರು ಸೇರಿ ಮಾಡುತ್ತಿರುವ 'ಆದ್ದರಿಂದ' ಎಂಬ ಅಂಥಾಲಜಿ ಸಿನಿಮಾದಲ್ಲಿ ಯೋಗರಾಜ್ ಭಟ್‌ರ ನಿರ್ದೇಶನದ ಭಾಗದಲ್ಲಿ ಗೋವಿಂದೇಗೌಡ ನಾಯಕರಾಗಿದ್ದರು.


Click it and Unblock the Notifications











