Just In
Don't Miss!
- News
ಪಶ್ಚಿಮ ಬಂಗಾಳ ಚುನಾವಣೆ; ಈ ಬಾರಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಬದಲಾವಣೆ
- Education
IIMB Recruitment 2021: ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
- Sports
ಐಪಿಎಲ್ 2021: ಹೊಸ ಆವೃತ್ತಿಗೆ ಸಿದ್ಧತೆ, ಚೆನ್ನೈಗೆ ಬಂದಿಳಿದ ಧೋನಿ, ರಾಯುಡು
- Finance
ಚಿನ್ನದ ಬೆಲೆ ಇಳಿಕೆ: ಗರಿಷ್ಠ ಮಟ್ಟಕ್ಕಿಂತ 11,500 ರೂ. ಕಡಿಮೆ
- Lifestyle
ರಾತ್ರಿ ವೇಳೆ ಬೇಳೆಕಾಳು ತಿನ್ನಬೇಕೋ ಬೇಡವೋ, ಆಯುರ್ವೇದ ಏನು ಹೇಳುತ್ತದೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಈ ಬಾರಿ ಕನ್ನಡ 'ಬಿಗ್ ಬಾಸ್'ನಲ್ಲಿ ಇರ್ತಾರಾ ಈ ಸುಂದರ ನಟ?
ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-8 ಆರಂಭಕ್ಕೆ ಕ್ಷಣ ಗಣನೆ ಪ್ರಾರಂಭವಾಗಿದೆ. ಇದೇ ತಿಂಗಳ ಕೊನೆಯಲ್ಲಿ ಅಂದರೆ ಫೆಬ್ರವರಿ 28ಕ್ಕೆ ಗ್ರ್ಯಾಂಡ್ ಓಪನ್ ಆಗಲಿದೆ. ಈಗಾಗಲೇ ಬಿಗ್ ಬಾಸ್ ಇಂಟರೆಸ್ಟಿಂಗ್ ಪ್ರೋಮೋ ಬಿಡುಗಡೆ ಆಗಿದ್ದು, ಕಿರುತೆರೆ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿದೆ.
ಅಂದಹಾಗೆ ಈ ಬಾರಿಯ ಬಿಗ್ ಬಾಸ್ ಗೆ ಯಾರೆಲ್ಲ ಹೋಗ್ತಾರೆ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದ್ದು, ಸಾಕಷ್ಟು ಜನರ ಹೆಸರು ಕೇಳಿಬರುತ್ತಿದೆ. ಇದೀಗ ಬಿಗ್ ಬಾಸ್ ಗೆ ಹೋಗುವ ಸಂಭಾವ್ಯರ ಪಟ್ಟಿಯಲ್ಲಿ ಮತ್ತೋರ್ವ ನಟನ ಹೆಸರು ಸೇರಿಕೊಂಡಿದೆ.
ಅದು ಮತ್ಯಾರು ಅಲ್ಲ ನಟ ಕಿರಣ್ ಶ್ರೀನಿವಾಸ್. ಹೌದು, ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಿರಣ್ ಶ್ರೀನಿವಾಸ್ ಇರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಬಿಗ್ ಬಾಸ್ ತಂಡ ಕಿರಣ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಕಿರಣ್ ಬಿಗ್ ಬಾಸ್ ಎಂಟ್ರಿಗೆ ಯಸ್ ಎಂದಿದ್ದಾರಾ ಇಲ್ಲವೋ ಎನ್ನುವುದು ಫೆಬ್ರವರಿ 28ರಂದು ಗೊತ್ತಾಗಲಿದೆ.
ಫೆಬ್ರವರಿ 28ರಿಂದ ಬಿಗ್ ಬಾಸ್ ಕನ್ನಡ ಶುಭಾರಂಭ: ಈ ಸಲ ಎಷ್ಟು ದಿನ?
ಹಾಗೆ ಸುಮ್ಮನೆ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟ ಕಿರಣ್ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಕಿರುತೆರೆಯಲ್ಲಿ ಬ್ಯುಸಿಯಾಗಿರುವ ಕಿರಣ್ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಾರೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ.
ಫೆಬ್ರವರಿ 28ರಂದು ಬಿಗ್ ಬಾಸ್ ಕನ್ನಡ ಸೀಸನ್ 8 ಪ್ರಾರಂಭವಾಗುತ್ತಿದ್ದು, ಈ ಬಾರಿ ಯಾರೆಲ್ಲ ಬಿಗ್ ಮನೆಯಲ್ಲಿ ಇರಲಿದ್ದಾರೆ ಎನ್ನುವುದು ಅಭಿಮಾನಿಗಳ ಕುತೂಹಲ. ಅಂದಹಾಗೆ ಈ ಬಾರಿ ಕೇವಲ ಸೆಲೆಬ್ರಿಟಿಗಳು ಮಾತ್ರ ಇರಲಿದ್ದು, ಕಾಮನ್ ಮ್ಯಾನ್ ಗೆ ಅವಕಾಶ ನೀಡಿಲ್ಲ. ಹಾಗಾಗಿ ಈ ಬಾರಿ ಯಾವೆಲ್ಲ ಕ್ಷೇತ್ರದ ಗಣ್ಯರು ಇರಲಿದ್ದಾರೆ ಎಂದು ಕಾದು ನೋಡಬೇಕು.