'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್

By Naveen

ಸ್ಟಾರ್ ಸುವರ್ಣ ವಾಹಿನಿಯ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಈಗ ಹೊಸ ಜೋಶ್ ಬಂದಿದೆ. ಅದಕ್ಕೆ ಕಾರಣ ಕಿಚ್ಚ ಸುದೀಪ್. ಹೌದು, ಇದೀಗ ಶಿವರಾಜ್ ಕುಮಾರ್ ಅವರ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಬಂದಿದ್ದಾರೆ. ಸುದೀಪ್ ಕಾರ್ಯಕ್ರಮಕ್ಕೆ ಆಗಮಿಸಿರುವ ಫೋಟೋ ನಿಮ್ಮ ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿದೆ.

ಈಗಾಗಲೇ ನಟರಾದ ಉಪೇಂದ್ರ, ಶರಣ್, ಲೂಸ್ ಮಾದ ಯೋಗಿ, ಧನಂಜಯ್, ವಸಿಷ್ಟ, ದಿಗಂತ್ ಈ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ ಈಗ ಕನ್ನಡದ ಆರಾಡಿ ಕಟ್ ಔಟ್ ಕಿಚ್ಚ ಸುದೀಪ್ ಕಾರ್ಯಕ್ರಮ ಅತಿಥಿ ಆಗಿದ್ದಾರೆ. ಈ ಮೂಲಕ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿಯೂ 'ದಿ ವಿಲನ್' ಜೋಡಿ ಒಂದಾಗಿದೆ. ಇನ್ನೊಂದು ಕಡೆ ಸುದೀಪ್ ಜೊತೆಗೆ ಬಂದಿರುವ ಅವರ ಆ ಸ್ನೇಹಿತ ಯಾರು ಎಂಬ ನಿರೀಕ್ಷೆ ಸಹ ಹೆಚ್ಚಾಗಿದೆ.

Actor Sudeep in No1 yari with Shivanna program

ಅಂದಹಾಗೆ, ಈ ಭಾನುವಾರ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ನಟಿ ಶೃತಿ ಹರಿಹರನ್ ಮತ್ತು ಶ್ರದ್ಧಾ ಶ್ರೀನಾಥ್ ಅವರ ಸಂಚಿಕೆ ಪ್ರಸಾರ ಆಗಲಿದೆ. ಅದರ ನಂತರದ ವಾರ ಸುದೀಪ್ ಅವರ ಸಂಚಿಕೆ ಪ್ರಸಾರ ಆಗಲಿದೆ. ಇನ್ನು ಸದ್ಯ ಹೊರ ಬಂದಿರುವ ಪೋಟೋದಲ್ಲಿ ಸುದೀಪ್ ಕಪ್ಪು ಬಣ್ಣದ ಬಟ್ಟೆಯಲ್ಲಿ ಮಿಂಚುತ್ತಿದ್ದಾರೆ. ಶಿವಣ್ಣ ಸುದೀಪ್ ಅವರಿಗೆ ಡ್ಯಾನ್ಸ್ ಹೇಳಿಕೊಡುತ್ತಿದ್ದಾರೆ. ಸುದೀಪ್ ಇದ್ದ ಮೇಲೆ ಆ ಸಂಚಿಕೆ ಸಿಕ್ಕಾಪಟ್ಟೆ ಮನರಂಜನೆ ನೀಡುವುದು ಪಕ್ಕಾ.

More from Filmibeat

English summary
Kannada actor Sudeep in Star Suvarna's new show 'No1 yari with Shivanna' program.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X