For Quick Alerts
  ALLOW NOTIFICATIONS  
  For Daily Alerts

  ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆಯ ಖ್ಯಾತ ನಟಿ ಚೈತ್ರಾ ರೆಡ್ಡಿ

  |

  ಕನ್ನಡ ಕಿರುತೆರೆಯ ಖ್ಯಾತ ನಟಿ ಚೈತ್ರಾ ರೆಡ್ಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅವನು ಮತ್ತು ಶ್ರಾವಣಿ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ಮನೆಮಾತಾಗಿರುವ ಚೈತ್ರಾ ಇತ್ತೀಚಿಗೆ ಬಹುಕಾಲದ ಗೆಳೆಯ ಮತ್ತು ಛಾಯಾಗ್ರಾಹಕ ರಾಕೇಶ್ ಸುಮಲ ಜೊತೆ ನಿಶ್ಚಿತಾರ್ಥ ಮಾಡಿದ್ದಾರೆ.

  ಸರಳವಾಗಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರಾ ಆಪ್ತರು ಮಾತ್ರ ಭಾಗಯಾಗಿದ್ದರು. ಚೈತ್ರಾ ಮತ್ತು ರಾಕೇಶ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಬ್ಬರ ನಿಶ್ಚಿತಾರ್ಥ ಸಮಾರಂಭದಲ್ಲಿ ಕಿರುತೆರೆಯ ಕಲೆವು ಕಲಾವಿದರು ಭಾಗಿಯಾಗಿ ಶುಭಹಾರೈಸಿದ್ದಾರೆ.

  ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ 'ಲಕ್ಷ್ಮೀ ಬಾರಮ್ಮ' ಖ್ಯಾತಿಯ ನಟ ಚಂದು: ಹುಡುಗಿ ಯಾರು?

  ಮೂಲತಹ ಆಂಧ್ರಪ್ರದೇಶದವರಾದ ನಟಿ ಚೈತ್ರಾ ರೆಡ್ಡಿ ಧಾರಾವಾಹಿ ಮಾತ್ರವಲ್ಲದೆ ಸಿನಿಮಾದಲ್ಲೂ ನಟಿಸಿದ್ದಾರೆ. ತಮಿಳು ಕಿರುತೆರೆ ಲೋಕದಲ್ಲೂ ಖ್ಯಾತಿಗಳಿಸಿದ್ದಾರೆ. ಅವನು ಮತ್ತೆ ಶ್ರಾವಣಿ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ತಮಿಳಿನಲ್ಲೂ ಎರಡು ಧಾರಾವಾಹಿಯಲ್ಲಿ ನಟಿಸಿದ್ದಾರೆ.

  ಇನ್ನೂ ಕನ್ನಡದಲ್ಲಿ ನಟ ವಿನೋದ್ ಪ್ರಭಾಕರ್ ಅಭಿನಯದ ರಗಡ್ ಸಿನಿಮಾದಲ್ಲಿ ಚೈತ್ರಾ ಮಿಂಚಿದ್ದಾರೆ. ರಾಕೇಶ್ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ ಜೊತೆಗೆ ಜಾಹೀರಾತುಗಳನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಂದ್ಹಾಗೆ ಈ ಜೋಡಿ ಒಬ್ಬರಿಗೊಬ್ಬರು ಪ್ರೀತಿಸುತ್ತಿರುವ ವಿಚಾರವನ್ನು ಈ ಮೊದಲೇ ಬಹಿರಂಗ ಪಡಿಸಿದ್ದರು.

  ಮಗು ಹುಟ್ಟಿದ ಕೂಡಲೇ ಮೇಘನಾ ಆಸೆ ಈಡೇರಿಸಿದ್ದು ಈ ವೈದ್ಯರು | Filmibeat Kannada

  ಸಾಮಾಜಿಕ ಜಾಲತಾಣದಲ್ಲಿ ರಾಕೇಶ್ ಜೊತೆ ಫೋಟೋ ಶೇರ್ ಮಾಡುವ ಮೂಲಕ ಪ್ರೀತಿಯ ಸುಳಿವು ನೀಡಿದ್ದರು. ಲಾಕ್ ಡೌನ್ ಸಮಯದಲ್ಲಿ ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಬಹಿರಂಗವಾಗಿದೆ.

  English summary
  Kannada Serial Actress Chaitra Reddy gets engaged to Cinematographer Rakesh Samala.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X