For Quick Alerts
  ALLOW NOTIFICATIONS  
  For Daily Alerts

  BBK9: ರೂಪೇಶ್ ಶೆಟ್ಟಿ ಹೊರಬರ್ತಿದ್ದಂತೆ 'ಮಂಕು ಭಾಯ್ ಫಾಕ್ಸಿ ರಾಣಿ' ಸಿನಿಮಾ ರಿಲೀಸ್‌ಗೆ ರೆಡಿ!

  |

  ಬಿಗ್ ಬಾಸ್ ಕನ್ನಡ ಓಟಿಟಿಯಿಂದಲೂ ರೂಪೇಶ್ ಶೆಟ್ಟಿ ಗಮನ ಸೆಳೆಯುತ್ತಿದ್ದಾರೆ. ಈಗ ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿಯಾಗಿಯೂ ಮಿಂಚುತ್ತಿದ್ದಾರೆ. ಅಂದ್ಗಾಗೆ ಬಿಗ್ ಮನೆಯೊಳಗೆ ಪ್ರವೇಶ ಮಾಡುವುದಕ್ಕೂ ಮುನ್ನ ರೂಪೇಶ್ ಶೆಟ್ಟಿ ಸಿನಿಮಾವೊಂದರಲ್ಲಿ ನಟಿಸಿದ್ದರು. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'.

  ರೂಪೇಶ್ ಶೆಟ್ಟಿ ಅಭಿನಯದ 'ಮಂಕು ಭಾಯ್ ಫಾಕ್ಸಿ ರಾಣಿ' ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಬಿಗ್‌ಬಾಸ್ ಪ್ರವೇಶ ಮಾಡಿದ ಬಳಿಕ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು, ಅವರೇ ನಟಿಸಿದ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೆ ಸೂಕ್ತ ಸಮಯವನ್ನು ಹುಡುಕಿಟ್ಟುಕೊಂಡಿದೆ.

  ಈಗಾಗಲೇ ಟೈಟಲ್ ಮೂಲಕವೇ ಈ ಸಿನಿಮಾ ಎಲ್ಲರ ಗಮನವನ್ನು ಸೆಳೆಯುತ್ತಿದೆ. ರೂಪೇಶ್ ಶೆಟ್ಟಿ ಮನೆಯೊಳಗೆ ಇರುವಾಗಲೇ ಚಿತ್ರತಂಡ ಸಿನಿಮಾ ಪ್ರಚಾರ ಕೆಲಸವನ್ನು ಆರಂಭಿಸಿದೆ. ಈಗಾಗಲೇ ಚಿತ್ರದ ಹಾಡುಗಳ ಮೂಲಕ ಎಲ್ಲರ ಮನಸೂರೆಗೊಳ್ಳುತ್ತಿದ್ದು, ಸದ್ಯ ಈ ಚಿತ್ರದ 'ತಂಗಾಳಿಯೇ ತಲುಪಿಸು' ಹಾಡು ರಿಲೀಸ್ ಆಗಿ ಎಲ್ಲರ ಮೆಚ್ಚುಗೆ ಗಳಿಸಿದೆ.

  'ಮಂಕು ಭಾಯ್ ಫಾಕ್ಸಿ ರಾಣಿ' ಸಿನಿಮಾದ ಈ ಪ್ಯಾಥೋ ಸಾಂಗ್ ಅನ್ನು ತಮಿಳಿನ ಖ್ಯಾತ ಗಾಯಕ ಹರಿಚರಣ್ ಹಾಡಿದ್ದಾರೆ. ಕೀರ್ತನ್ ಭಂಡಾರಿ ಸಾಹಿತ್ಯ, ವಿನ್ಯಾಸ್ ಮದ್ಯ ಸಂಗೀತ ನೀಡಿದ್ದು, ಈಗಾಗಲೇ ಬಿಡುಗಡೆಯಾಗಿ ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ಇದಕ್ಕೂ ಮುನ್ನ ರಿಲೀಸ್ ಆಗಿದ್ದ ಸೋನು ನಿಗಮ್ ಹಾಡಿದ್ದ 'ಮಿಂಚಂತೆ ಮಿನುಗುತಿರೊ' ಸಾಂಗ್ ಕೂಡ ಗಮನ ಸೆಳೆದಿತ್ತು.

  ಬಿಗ್ ಬಾಸ್ ಓಟಿಟಿ ಸೀಸನ್ ವಿನ್ನರ್ ಹಾಗೂ ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿ ರೂಪೇಶ್ ಶೆಟ್ಟಿಗೆ ನಟನೆ ಹೊಸದೇನಲ್ಲ. ಈಗಾಗಲೇ ಹಲವು ತುಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. 'ಮಂಕು ಭಾಯ್ ಫಾಕ್ಸಿ ರಾಣಿ' ಸಿನಿಮಾದಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, 'ಬ್ರಹ್ಮಗಂಟು' ಧಾರಾವಾಹಿಯ ಗೀತಾ ಭಾರತಿ, ಪಂಚಮಿ ರಾವ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

  'ಮಂಕು ಭಾಯ್ ಫಾಕ್ಸಿ ರಾಣಿ' ಸಿನಿಮಾದಲ್ಲಿ ಲವ್, ಸಸ್ಪೆನ್ಸ್ ಕಥಾಹಂದರ ಒಳಗೊಂಡಿದೆ. ಈ ಸಿನಿಮಾವನ್ನು ಗಗನ್ ಎಂ ನಿರ್ದೇಶನ ಮಾಡಿದ್ದಾರೆ. ಕಿರುಚಿತ್ರ ಹಾಗೂ ಕೆಲ ತುಳು ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿದ್ದು, 'ಮಂಕು ಭಾಯ್ ಫಾಕ್ಸಿ ರಾಣಿ' ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕನಾಗಿದ್ದಾರೆ.

  BBK9 Contestants Roopesh Shetty Movie Manku Bhai Faksi Rani Releasing Next Year

  ಈ ಚಿತ್ರಕ್ಕೆ ವಿನ್ಯಾಸ್ ಮದ್ಯ, ಶಮೀರ್ ಮುಡಿಪು ಸಂಗೀತ ನಿರ್ದೇಶನವಿದೆ. ಶಿನೋಯ್ ವಿ ಜೋಸೆಫ್ ಹಿನ್ನೆಲೆ ಸಂಗೀತ, ಎಂ.ಕೆ ಷಜಹಾನ್ ಕ್ಯಾಮೆರಾ ನಿರ್ದೇಶನ, ಸುಶಾಂತ್ ಶೆಟ್ಟಿ, ಪ್ರಜ್ವಲ್ ಸುವರ್ಣ ಸಂಕಲನ ಚಿತ್ರಕ್ಕಿದೆ. ಪ್ರಕಾಶ್ ತೂಮಿನಾಡು, ಅರ್ಜುನ ಕಜೆ, ಪ್ರಶಾಂತ್ ಅಂಚನ್, ವಿವೇಕ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಈ ಸಿನಿಮಾಗೆ ಸೆನ್ಸಾರ್ ಅಧಿಕಾರಿಗಳಿಂದ ಯು/ಎ ಸರ್ಟಿಫಿಕೇಟ್ ಕೂಡ ಸಿಕ್ಕಿದೆ. 'ಮಂಕು ಭಾಯ್ ಫಾಕ್ಸಿ ರಾಣಿ' ಜನವರಿಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

  English summary
  BBK9 Contestants Roopesh Shetty Movie Manku Bhai Faksi Rani Releasing Next Year, Know More.
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X