BBK 12: ಬಿಗ್‌ಬಾಸ್ ಕನ್ನಡ ಸೀಸನ್ 12 ಶೋ ನಿಲ್ಲಿಸುವಂತೆ ನೋಟಿಸ್
ಕಿಚ್ಚ ಸುದೀಪ್ ನೇತೃತ್ವದಲ್ಲಿ ಬಿಗ್‌ಬಾಸ್ ಕನ್ನಡ 12ನೇ ಸೀಸನ್ ವೀಕ್ಷಕರನ್ನು ರಂಜಿಸುತ್ತಿದೆ. ಈಗಾಗಲೇ ಒಂದು ವಾರ ಕಂಪ್ಲೀಟ್ ಆಗಿ 2ನೇ ವಾರಕ್ಕೆ ಶೋ ಮುಂದುವರೆದಿದೆ. 19 ಜನ ಸ್ಪರ್ಧಿಗಳು ಮನೆಯೊಳಗೆ ಹೋಗಿದ್ದರು. ಈಗಾಗಲೇ ಇಬ್ಬರು ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಇದೆಲ್ಲದರ ನಡುವೆ ಇದೀಗ ಶೋ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಶಾಕ್ ಕೊಟ್ಟಿದೆ.
ಮೈಸೂರು ರಸ್ತೆ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋದಲ್ಲಿ ಸೆಟ್ ಹಾಕಿ ಈ ಬಾರಿ ಬಿಗ್‌ಬಾಸ್ ಶೋ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಿಂದ ಸಾಕಷ್ಟು ತಾಜ್ಯ ಶೇಖರಣೆ ಆಗುತ್ತಿದ್ದು ಅದನ್ನು ಸರಿಯಾದ ರೀತಿಯಲ್ಲಿ ಸಂಸ್ಕರಣೆ ಹಾಗೂ ವಿಲೇವಾರಿ ಮಾಡುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಜಾಲಿವುಡ್ ಸ್ಟುಡಿಯೋ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸರಿಯಾಗಿ ಅನುಮತಿ ಕೂಡ ಸಿಕ್ಕಿಲ್ಲ. ಅದೇ ಕಾರಣಕ್ಕೆ ನೋಟಿಸ್ ಕೊಟ್ಟು ಶೋ ನಿಲ್ಲಿಸಲು ಸೂಚಿಸಲಾಗಿದೆ. ಹಾಗಾಗಿ ಬಿಗ್‌ಬಾಸ್ ಶೋಗೂ ಸಂಕಷ್ಟ ಎದುರಾದಂತಾಗಿದೆ.

ಜಾಲಿವುಡ್ ಅಮ್ಯೂಸ್‌ಮೆಂಟ್ ಪಾರ್ಕ್‌ನಿಂದ ತ್ಯಾಜ್ಯ ನೀರು ಬರ್ತಿದೆ. ಪೇಪರ್ ಲೋಟ, ತಟ್ಟೆ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿ ಬಿಸಾಡುತ್ತಿದ್ದಾರೆ. ಅದನ್ನೆಲ್ಲಾ ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿಲ್ಲ ಎನ್ನುವ ಗಂಭೀರ ಆರೋಪ ಕೇಳಿಬರ್ತಿದೆ. ಬಿಗ್‌ಬಾಸ್ ಮನೆಯಲ್ಲಿ ಸದ್ಯ 17 ಮಂದಿ ಸ್ಪರ್ಧಿಗಳು ಇದ್ದರೂ ತೆರೆಹಿಂದೆ ನೂರಾರು ಜನ ಕಾರ್ಮಿಕರು, ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಸಹಜವಾಗಿಯೇ ಸಾಕಷ್ಟು ತ್ಯಾಜ್ಯ ಶೇಖರಣೆ ಆಗುತ್ತಿದೆ.
ಕಳೆದ ಭಾನುವಾರ ಬಿಗ್‌ಬಾಸ್ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ನಡೆದಿತ್ತು. ವಿವಿಧ ಕ್ಷೇತ್ರಗಳ 19 ಮಂದಿ ಸ್ಪರ್ಧಿಗಳು ಮನೆಯೊಳಗೆ ಹೋಗಿದ್ದರು. ಮೊದಲ ದಿನವೇ ರಕ್ಷಿತಾ ಶೆಟ್ಟಿ ಹೊರಬಂದಿದ್ದರು. ಬಳಿಕ ಶನಿವಾರ ಮನೆಗೆ ವಾಪಸ್ ಆಗಿದ್ದರು. ಆದರೆ ಅಮಿತ್ ಹಾಗೂ ಕರಿಬಸಪ್ಪ ಮೊದಲ ವಾರವೇ ಎಲಿಮಿನೇಟ್ ಆಗಿ ಮನೆಗೆ ಗುಡ್‌ಬೈ ಹೇಳಿದ್ದಾರೆ.


Click it and Unblock the Notifications











