Just In
Don't Miss!
- News
ಬಜೆಟ್ ಮಂಡಿಸಲು ಸರ್ಕಾರಕ್ಕೆ ನೈತಿಕತೆಯಿಲ್ಲ, ಸಭಾತ್ಯಾಗ ಮಾಡುತ್ತೇವೆ: ಸಿದ್ದರಾಮಯ್ಯ
- Sports
ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ, ದಿನಾಂಕ, ಸಮಯ ಹಾಗೂ ಸ್ಥಳ
- Finance
20 ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದ ಕಚ್ಚಾ ತೈಲ ಬೆಲೆ
- Lifestyle
ಯಾವಾಗ ಅವಳಿ ಮಕ್ಕಳಾಗುವ ಸಾಧ್ಯತೆ ಹೆಚ್ಚು?
- Automobiles
ಬಿಡುಗಡೆಯಾಗಲಿದೆ ಲಾಂಗ್ ವೀಲ್ಹ್ಬೆಸ್ ಹೊಂದಿರುವ ಲ್ಯಾಂಡ್ ರೋವರ್ ಡಿಫೆಂಡರ್
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಗ್ ಬಾಸ್ ಕನ್ನಡ ಸೀಸನ್ 8: ಪ್ರೋಮೋ ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್, ಫೋಟೋ ವೈರಲ್
ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಕೂಡ ಒಂದು. ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಬಿಗ್ ಬಾಸ್ ಪ್ರಾರಂಭವಾಗಿ, ಅದ್ದೂರಿಯಾಗಿ ತೆರೆ ಬೀಳಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಈ ಬಾರಿಯ ಕನ್ನಡದ ಬಿಗ್ ಬಾಸ್ ತಡವಾಗಿ ಶುರುವಾಗುತ್ತಿದೆ.
ಜನವರಿ ಕೊನೆಯ ವಾರದಲ್ಲಿ ಬಿಗ್ ಬಾಸ್ ಪ್ರಾರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮತ್ತೆ ಮುಂದಕ್ಕೆ ಹೋಗಿದ್ದು ಸದ್ಯ ಬಿಗ್ ಬಾಸ್ ಕೆಲಸಗಳು ಭರದಿಂದ ನಡೆಯುತ್ತಿದೆ. ಈ ನಡುವೆ ಬಿಗ್ ಬಾಸ್ ಸೀಸನ್ 8ಯಿಂದ ಬಿಗ್ ಅಪ್ ಡೇಟ್ ಹೊರಬಿದ್ದಿದ್ದು, ಕಿಚ್ಚ ಸುದೀಪ್ ಪ್ರೋಮೋ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಬಿಗ್ ಬಾಸ್ ಕನ್ನಡ ಹೊಸ ಆವೃತ್ತಿ ಮತ್ತೆ ಮುಂದೂಡಿಕೆ ಅಂತೆ?
ಕಲರ್ಸ್ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಮತ್ತು ಸುದೀಪ್ ಇಬ್ಬರು ಚಿತ್ರೀಕರಣ ಸೆಟ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ವೈರಲ್ ಆಗುತ್ತಿದಂತೆ ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಪ್ರೋಮೋ ಶೂಟ್ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಜೊತೆಗೆ ಸ್ಟೈಲಿಶ್ ಫೋಟೋವನ್ನು ಹಂಚಿಕೊಂಡಿದ್ದಾರೆ.
ಈ ಮೂಲಕ ಬಿಗ್ ಬಾಸ್ ಪ್ರಾರಂಭ ಆಗುತ್ತೋ ಇಲ್ಲವೋ ಎನ್ನುವ ಅಭಿಮಾನಿಗಳ ಅನುಮಾನಕ್ಕೆ ತೆರೆಬಿದ್ದಿದೆ. ಸುದೀಪ್ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಕಾತರರಾಗಿದ್ದೇವೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಸದ್ಯ ಪ್ರೋಮೋ ಶೂಟ್ ಜೊತೆಗೆ ಸ್ಪರ್ಧಿಗಳ ಆಯ್ಕೆ ಕೂಡ ನಡೆಯುತ್ತಿದೆ. ಮೂಲಗಳ ಪ್ರಕಾರ ಬಿಗ್ ಬಾಸ್ ಕನ್ನಡ ಸೀಸನ್ 8 ಮಾರ್ಚ್ ತಿಂಗಳಿಂದ ಆರಂಭವಾಗಲಿದೆ ಎನ್ನಲಾಗುತ್ತಿದೆ. ಈ ಬಾರಿಯ ಬಿಗ್ ಬಾಸ್ ಹೇಗಿರಲಿದೆ, ಯಾರೆಲ್ಲ ಭಾಗಿಯಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.