'ಬಿಗ್ ಬಾಸ್ ಕನ್ನಡ ಸೀಸನ್ 8' ಯಾವಾಗ ಪ್ರಾರಂಭವಾಗಲಿದೆ? ಇಲ್ಲಿದೆ ಅಪ್ ಡೇಟ್
ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಕೂಡ ಒಂದು. ಈಗಾಗಲೇ ಕನ್ನಡದಲ್ಲಿ ಬಿಗ್ ಬಾಸ್ 7 ಸೀಸನ್ ಗಳು ಯಶಸ್ವಿಯಾಗಿ ಮುಕ್ತಾಯವಾಗಿದೆ. ಬಿಗ್ ಬಾಸ್ ಮೊದಲ ಸೀಸನ್ ನಿಂದನೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರೇ ಹೋಸ್ಟ್ ಮಾಡುವ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ.
ಇದೀಗ ಬಿಗ್ ಬಾಸ್ 8ನೇ ಸೀಸನ್ ಗೆ ತಯಾರಿ ನಡೆಯುತ್ತಿದೆ. ಅಂದುಕೊಂಡಂತೆ ಆಗಿದ್ದಾರೆ ಬಿಗ್ ಬಾಸ್ ಸೀಸನ್-8 ಈಗಾಗಲೇ ಪ್ರಾರಂಭವಾಗಿ ಯಶಸ್ವಿಯಾಗಿ ತೆರೆಬೀಳಬೇಕಿತ್ತು. ಆದರೆ ಕೊರೊನಾ ವೈರಸ್ ಹಾವಳಿಯ ಪರಿಣಾಮ ಬಿಗ್ ಬಾಸ್ ಪ್ರಾರಂಭಿಸಬೇಕೋ ಬೇಡವೋ ಎನ್ನುವ ಗೊಂದಲದಲ್ಲಿದ್ದರು ಆಯೋಜಕರು.
ಕೊನೆಗೂ ಬಿಗ್ ಬಾಸ್-8 ಪ್ರಾರಂಭ ಮಾಡುವುದಾಗಿ ಅಪ್ ಡೇಟ್ ನೀಡುವ ಮೂಲಕ ಕಿರುತೆರೆ ಪ್ರೇಕ್ಷಕರ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಿಸಿದ್ದಾರೆ. ಅಂದಹಾಗೆ ಈಗಾಗಲೇ ಬೇರೆ ಬೇರೆ ಭಾಷೆಯಲ್ಲಿ ಬಿಗ್ ಬಾಸ್ ಪ್ರಾರಂಭವಾಗಿದೆ. ತೆಲುಗಿನಲ್ಲಿ ಲಾಕ್ ಡೌನ್ ಬಳಿಕ ಬಿಗ್ ಬಾಸ್ ಪ್ರಾರಂಭಿಸಿ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ.

ಇದೀಗ ಕನ್ನಡದಲ್ಲಿ ಬಿಗ್ ಬಾಸ್ ಪ್ರಾರಂಭವಾಗುತ್ತಿದ ಎನ್ನುವ ಮಾಹಿತಿ ಕಳೆದ ಕೆಲವು ದಿನಗಳ ಹಿಂದೆಯೇ ಕೇಳಿದ್ದೀರಿ. ಇದೀಗ ಬಿಗ್ ಬಾಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದ್ದು, ಯಾವಾಗ ಪ್ರಾರಂಭವಾಗಲಿದೆ ಎನ್ನುವುದು ಮಾಹಿತಿ ರಿವೀಲ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್-8 ಜನವರಿಯಿಂದ ಪ್ರಾರಂಭವಾಗಲಿದೆ ಎನ್ನುವ ಮಾಹಿತಿ ಬಹಿರಂಗವಾಗಿತ್ತು. ಆದರೆ ಯಾವಾಗ ಎನ್ನುವ ಬಗ್ಗೆ ಸ್ಪಷ್ಟತೆ ಇರಲಿಲ್ಲ.
ಈ ಬಾರಿಯ ಕನ್ನಡ ಬಿಗ್ ಬಾಸ್ ಜನವರಿ ಮೂರನೆ ವಾರ ಅಥವಾ ಕೊನೆಯ ವಾರದಿಂದ ಪ್ರಾರಂಭವಾಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈಗಾಗಲೇ ಬಿಗ್ ಬಾಸ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸ್ಪರ್ಧಿಗಳ ಆಯ್ಕೆ ಬಹುತೇಕ ಮುಕ್ತಾಯವಾಗಿದೆ. ಈ ಬಾರಿ ಬಿಗ್ ಬಾಸ್ ನಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಕಿಚ್ಚ ಸುದೀಪ್ ಸಹ ಬಹುನಿರೀಕ್ಷೆಯ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮುಗಿಸಿ ಬಿಗ್ ಬಾಸ್ ನಲ್ಲಿ ಬ್ಯುಸಿಯಾಲಿದ್ದಾರೆ. ಫ್ಯಾಂಟಮ್ ಬಳಿಕ ಸುದೀಪ್ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ರಿವೀಲ್ ಆಗಿಲ್ಲ. ಆದರೆ ಫ್ಯಾಂಟಮ್ ಬಳಿಕ ಕಿಚ್ಚ ಬಿಗ್ ಬಾಸ್ ನಲ್ಲಿ ಬ್ಯುಸಿಯಾಗುವುದು ಖಚಿತವಾಗಿದೆ.


Click it and Unblock the Notifications











