Don't Miss!
- Sports
ಗೆದ್ದ ಜಯ್ ಶಾ ಹಠ, ಪಾಕ್ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ
- Lifestyle
Horoscope Today 5 Feb 2023: ಭಾನುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ಗುಜರಾತ್ಗೆ ಬರಲಿದ್ದಾರೆ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Technology
ಅಜ್ಜಿಗೆ ಆಪ್ಗಳ ಬಗ್ಗೆ ತಿಳಿಸಿಕೊಟ್ಟ ಯುವಕ; ವೈರಲ್ ಆಯ್ತು ವಿಡಿಯೋ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕೋವಿಡ್ ಎಫೆಕ್ಟ್: ಅರ್ಧಕ್ಕೆ ನಿಂತ ಬಿಗ್ ಬಾಸ್, ಭಾನುವಾರ ಕೊನೆಯ ಸಂಚಿಕೆ
ಕೊರೊನಾ ವೈರಸ್ ಭೀತಿಯ ನಡುವೆಯೇ ಆರಂಭವಾಗಿದ್ದ ಬಿಗ್ ಬಾಸ್ ಕನ್ನಡ ಎಂಟನೇ ಆವೃತ್ತಿ ಅರ್ಧಕ್ಕೆ ಸ್ಥಗಿತಗೊಳ್ಳುತ್ತಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಎರಡು ವಾರ ಲಾಕ್‌ಡೌನ್ ಆದೇಶಿಸಿದೆ.
ಈ ಹಿನ್ನೆಲೆ ಧಾರಾವಾಹಿಗಳು, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಹಾಗಾಗಿ, ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ಸಹ ರದ್ದುಗೊಂಡಿದೆ.
ಸುದೀಪ್
ಅನಾರೋಗ್ಯದ
ಬಗ್ಗೆ
ಸ್ಪಷ್ಟನೆ:
ನಿರೂಪಣೆಯಿಂದ
ಹಿಂದೆ
ಸರಿದ
ಕಿಚ್ಚ
ಬಿಗ್ ಬಾಸ್ ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ಸುದ್ದಿಯನ್ನು ಬಿಗ್ ಬಾಸ್ ನಿರ್ದೇಶಕ ಹಾಗೂ ಕಲರ್ಸ್ ಕನ್ನಡ ವಾಹಿನಿ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಗುಂಡ್ಕಲ್ ಭಾನುವಾರ ಕೊನೆಯ ಸಂಚಿಕೆ ಪ್ರಸಾರ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
''ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.
ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ.
ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ'' ಎಂದು ಪರಮೇಶ್ವರ್ ಗುಂಡ್ಕಲ್ ಪೋಸ್ಟ್ ಮಾಡಿದ್ದಾರೆ.