ಸಾವಿರ ಸಂಚಿಕೆ ಪೂರೈಸಿದ 'ಬೊಂಬಾಟ್ ಭೋಜನ'- 3: ಸುಗ್ಗಿ ಹಬ್ಬಕ್ಕೆ ಹೊಸ ಸೀಸನ್ ಶುರು

ಕನ್ನಡ ಕಿರುತೆರೆಯ ಜನಪ್ರಿಯ ಅಡುಗೆ ಕಾರ್ಯಕ್ರಮ 'ಬೊಂಬಾಟ್ ಭೋಜನ' ದಾಖಲೆ ಬರೆದಿದೆ. ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ಈ ಕಾರ್ಯಕ್ರಮದ ಸೀಸನದ-3 ಸದ್ಯ 1000 ಸಂಚಿಕೆಗಳನ್ನು ಪೂರೈಸಿದೆ. ಶೀಘ್ರದಲ್ಲೇ 4ನೇ ಸೀಸನ್ ಆರಂಭವಾಗುತ್ತಿದೆ.

ಇತ್ತೀಚೆಗೆ ಅದ್ಧೂರಿ ಕಾರ್ಯಕ್ರಮ ಮಾಡಿ

'ಬೊಂಬಾಟ್ ಭೋಜನ' 1000 ಸಂಚಿಕೆಯ ಸಂಭ್ರಮವನ್ನು ಆಚರಿಸಿಲಾಗಿದೆ. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ 'ಬೊಂಬಾಟ್ ಭೋಜನ' ಹಾಕಿಸಿ ಚಂದ್ರು ಕಾರ್ಯಕ್ರಮದ ಬಗ್ಗೆ ಮಾಹಿತಿ ಹಂಚಿಕೊಂಡರು.

Bombat Bhojana season 3 cookery show complets 1000 episodes

3ನೇ ಸೀಸನ್ ಬಗ್ಗೆ ಮಾತನಾಡಿದ ಚಂದ್ರು, "ನಾಡಿನ ಹಲವು ಜಿಲ್ಲೆಗಳಿಗೆ ಹೋಗಿ ಅಲ್ಲಿನ ಮಹಿಳಾ ಮಂಡಳಿ ಸದಸ್ಯರಿಗೆ ಅಡಿಗೆ ಮಾಡಿ ತೋರಿಸಲಾಗಿದೆ. ಆಹ್ವಾನಿಸಿದವರ ಮನೆಗೆ ಹೋಗಿ ಅವರು ಪ್ರೀತಿಯಿಂದ ಮಾಡಿದ ತಿಂಡಿಯನ್ನು ಸವಿದು ಬಂದಿದ್ದೇನೆ. ಬರೀ ಅಡುಗೆಯಷ್ಟೇ ಅಲ್ಲ, 'ಅಂದ ಚೆಂದ' ಎಂಬ ಹೊಸ ವಿಭಾಗಗಳ ಮೂಲಕ ಮಹಿಳೆಯರು ತಮ್ಮ ಅಂದ ಹೆಚ್ಚಿಸಿಕೊಳ್ಳುವ ಮೇಕಪ್‍, ಕೇಶವಿನ್ಯಾಸ ತರಬೇತಿ ನೀಡಲಾಗಿದೆ. ಗೌರಿಯಮ್ಮ ನಡೆಸಿಕೊಡುವ 'ಅಂಗೈಲಿ ಆರೋಗ್ಯ' ವಿಭಾಗದಲ್ಲಿ ಹಲವು ಆರೋಗ್ಯದ ಟಿಪ್ಸ್ ಗಳನ್ನು ನೀಡಲಾಗಿದೆ. ಈ ಬಾರಿ ಅಮೇರಿಕಾ, ಆಫ್ರಿಕಾ ಮುಂತಾದ ಕಡೆ ಹೋಗಿ ಅಡುಗೆ ಕಾರ್ಯಕ್ರಮ ಮಾಡಿ ಬಂದಿರುವುದು ವಿಶೇಷ" ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸೀಸನ್ 3ರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭಾಸ್ಕರ್ ರಾವ್‍, ಸುಧಾ ಮೂರ್ತಿ, ಗುರುರಾಜ ಕರ್ಜಗಿ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದಾರೆ. ನಾನು ಶಿವಕುಮಾರ್ ‍ಇಬ್ಬರೂ ಬಾಲ್ಯ ಸ್ನೇಹಿತರು. ಯಾವತ್ತೂ ಏನೂ ಕೇಳಿರಲಿಲ್ಲ. ಈ ಕಾರ್ಯಕ್ರಮಕ್ಕೆ ಬರುವಂತೆ ಕೇಳಿದಾಗ, ಸಂತೋಷದಿಂದ ಬಂದು ಭಾಗವಹಿಸಿದರು. ಗುರುರಾಜ ಕರ್ಜಗಿ ನಮ್ಮ ಮೇಷ್ಟ್ರು. ಅವರು ಸಹ ಪ್ರೀತಿಯಿಂದ ಬಂದರು. ಹೀಗೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ" ಎಂದು ಚಂದ್ರು ಮಾಹಿತಿ ನೀಡಿದರು.

Bombat Bhojana season 3 cookery show complets 1000 episodes

ಒಟ್ಟಾರೆ 'ಬೊಂಬಾಟ್‍ ಭೋಜನ' ಶೋ 3 ಸೀಸನ್‍ಗಳಿಂದ 2000ಕ್ಕೂ ಹೆಚ್ಚು ಕಂತುಗಳಾಗಿ ಪ್ರಸಾರವಾಗಿದೆ. ಇದೊಂದು ದಾಖಲೆ ಎಂದು ಮಾಹಿತಿ ನೀಡಿದ ಸಿಹಿಕಹಿ ಚಂದ್ರು, ಮುಂದಿನ ದಿನಗಳಲ್ಲಿ ನೋಡಿಕೊಂಡು ಗಿನ್ನೀಸ್‍ ಅಥವಾ ಲಿಮ್ಕಾ ಬುಕ್‍ ಆಫ್‍ ರೆಕಾರ್ಡ್ಸ್ ಸಂಸ್ಥೆಗಳಿಗೆ ಸೂಕ್ತ ದಾಖಲೆ ಸಲ್ಲಿಸುವುದಾಗಿ" ತಿಳಿಸಿದರು.

ಕಾರ್ಯಕ್ರಮದಲ್ಲಿ 'ಬೊಂಬಾಟ್‍ ಭೋಜನ- 3' ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಹಾಗೆಯೇ, ಚಂದ್ರು ಅವರನ್ನು ಸ್ಟಾರ್ ಸುವರ್ಣ ವಾಹಿನಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಂಕ್ರಾಂತಿ ಸಂಭ್ರಮದಲ್ಲಿ ಹೊಸ ಸೀಸನ್ ಶುರುವಾಗುತ್ತಿದ್ದು ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಸಿಹಿಕಹಿ ಚಂದ್ರು ಇತ್ತೀಚೆಗೆ ಕಿರುತೆರೆ ಧಾರಾವಾಹಿಯಲ್ಲಿ ಕೂಡ ನಟಿಸುತ್ತಿದ್ದಾರೆ. 'ಅಮೃತಧಾರೆ' ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ತಂದೆ ಸದಾಶಿವ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸಿನಿಮಾಗಳಲ್ಲಿ ಕೂಡ ಬಣ್ಣ ಹಚ್ಚುತ್ತಿದ್ದಾರೆ.

More from Filmibeat

English summary
Bombat Bhojana season- 3 show celebrates a milestone as it completes 1000 episodes
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X