ಬ್ರೇಕಿಂಗ್ ನ್ಯೂಸ್: ಸಾಧಕರ ಸೀಟ್ ಮೇಲೆ ಕುಳಿತ ಮುಖ್ಯಮಂತ್ರಿ ಸಿದ್ದರಾಮಯ್ಯ
ಅಂತೂ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಸಾಧಕರ ಸೀಟ್ ಮೇಲೆ ಸಿ.ಎಂ ಸಾಹೇಬ್ರು ಆಸೀನರಾಗಿದ್ದಾರೆ. ಅಲ್ಲಿಗೆ, 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಾರೋ, ಇಲ್ಲವೋ ಎಂಬ ಅನುಮಾನಕ್ಕೆ ಇಂದು ತೆರೆ ಬಿದ್ದಿದೆ.
ಜೀ ಕನ್ನಡ ವಾಹಿನಿಯ ಜನಪ್ರಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿರುವುದಕ್ಕೆ ಸಾಕ್ಷಿ, ನಿಮ್ಮ 'ಫಿಲ್ಮಿಬೀಟ್ ಕನ್ನಡ'ಗೆ ಲಭ್ಯವಾಗಿರುವ ಈ ಫೋಟೋಗಳು...

ಈ ಫೋಟೋ ನೋಡಿ...
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ರವರನ್ನ ಕರೆತರುವಲ್ಲಿ ಜೀ ಕನ್ನಡ ವಾಹಿನಿ ಯಶಸ್ವಿ ಆಗಿದೆ. ಬೇಕಾದ್ರೆ, ಈ ಫೋಟೋ ನೋಡಿ...

ಇಂದು ನಡೆಯುತ್ತಿದೆ ರೆಕಾರ್ಡಿಂಗ್
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿರುವ ಸಂಚಿಕೆಯ ಚಿತ್ರೀಕರಣ ಇಂದು ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಫೇಸ್ ಬುಕ್ ನಲ್ಲಿ ಲೈವ್
'ವೀಕೆಂಡ್ ವಿತ್ ರಮೇಶ್' ಶೂಟಿಂಗ್ ಸ್ಪಾಟ್ ನಿಂದ ಇಂದು ಜೀ ಕನ್ನಡ ವಾಹಿನಿ ಫೇಸ್ ಬುಕ್ ನಲ್ಲಿ ಲೈವ್ ಕೂಡ ಮಾಡಿದೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

ಯಾರ್ಯಾರೆಲ್ಲಾ ಭಾಗಿ.?
ಸಿದ್ದರಾಮಯ್ಯ ರವರ ಕುಟುಂಬಸ್ಥರು, ಆಪ್ತರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಸಾರ ಯಾವಾಗ.?
ಇದೇ ಶನಿವಾರ ಹಾಗೂ ಭಾನುವಾರ ಸಿದ್ದರಾಮಯ್ಯ ಪಾಲ್ಗೊಂಡಿರುವ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ಪ್ರಸಾರ ಆಗಲಿದೆ.


Click it and Unblock the Notifications











