ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಡಾಲಿನೇ ರಾಯಭಾರಿ: ಲಿಡ್ಕರ್‌ಗೆ ಜೈ ಎಂದ ಧನಂಜಯ್

By ಫಿಲ್ಮಿಬೀಟ್ ಡೆಸ್ಕ್

ಡಾಲಿ ಧನಂಜಯ್ ತಮ್ಮ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಶಿವಣ್ಣನ ಬಳಿಕ ಅತೀ ಹೆಚ್ಚು ಸಿನಿಮಾಗಳು ಇವರ ಕೈಯಲ್ಲೇ ಇವೆ. ಇನ್ನು ನಟನೆ ಜೊತೆ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ. ನಿರ್ಮಾಪಕನಾಗಿಯೂ ಗೆದ್ದು ಬೀಗಿದ್ದಾರೆ. ಆಗಾಗ ಸಾಹಿತ್ಯ ರಚಿಸಿ ಮನಗೆದ್ದಿದ್ದಾರೆ.

ಇಷ್ಟೊಂದು ಬ್ಯುಸಿ ಶೆಡ್ಯೂಲ್ ನಡುವೆ ಡಾಲಿ ಧನಂಜಯ್ ಸಿಕ್ಕಾಪಟ್ಟೆ ಸಮಾಜಮುಖಿ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್‌)ಗೆ ರಾಯಬಾರಿಯಾಗಿ ಡಾಲಿ ಧನಂಜಯ್ ಆಯ್ಕೆ ಆಗಿದ್ದಾರೆ.

daali-dhananjay-lidkar-ambassador

ಲಿಡ್ಕರ್ ಇದೇ ಮೊದಲ ಬಾರಿಗೆ ರಾಯಬಾರಿಯನ್ನು ಆಯ್ಕೆ ಮಾಡಿದೆ. ಈ ಸಂಬಂಧ ಧನಂಜಯ್ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ. ಈ ಮೂಲಕ ಸಾವಿರಾರು ಕುಟುಂಬಕ್ಕೆ ಜೊತೆಯಾಗಿದ್ದಾರೆ.

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲ ಕರ್ಮಿಗಳ ಕುಟುಂಬವಿದೆ. ಚರ್ಮ ಕುಶಲವನ್ನೇ ನಂಬಿಕೊಂಡು ಜೀವನ ನಡೆಸುತ್ತಿವೆ. ಹೀಗಾಗಿ ಈ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ನಟ ರಾಕ್ಷಸ ಧನಂಜಯ್‌ರನ್ನು ರಾಯಾಭಾರಿಯಾಗಿ ನೇಮಕ ಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆ ನಡೆದಿದ್ದು, ಧನಂಜಯ್ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

daali-dhananjay-lidkar-ambassador

"ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ. ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ. ಹಾಗಾಗಿ ಅವರನ್ನು ಆಯ್ಕೆ ಮಾಡಿದ್ದೇವೆ. ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ." ಎಂದು ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ ಪ್ರತಿಕ್ರಿಯೆ ನೀಡಿದ್ದಾರೆ.

ಧನಂಜಯ್ ನಿರ್ಮಾಣ ಮಾಡಿದ 'ಟಗರು ಪಲ್ಯ' ಸಿನಿಮಾ ಕೆಲವೇ ದಿನಗಳ ಹಿಂದಷ್ಟೇ ರಿಲೀಸ್ ಆಗಿತ್ತು. ಡಾಲಿ ಸಿನಿಮಾ ನಿರ್ಮಾಣದ ಜೊತೆಗೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ 'ಪುಷ್ಪ-2' ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೊತೆ ಕಾದಾಡಲಿದ್ದಾರೆ. ಅಂದ್ಹಾಗೆ ಇದ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಮುಂದಿನ ವರ್ಷ ಅದ್ಧೂರಿಯಾಗಿ ಬಿಡುಗದೆಯಾಗಲಿದೆ.

More from Filmibeat

English summary
Daali Dhananjay became ambassador for Lidkar products
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X