For Quick Alerts
  ALLOW NOTIFICATIONS  
  For Daily Alerts

  ಕಿರುತೆರೆ ಹಿರಿಯ ಕಲಾವಿದರಿಗೆ, ತಂತ್ರಜ್ಞರಿಗೆ ಉಚಿತ ಕೊರೊನಾ ಲಸಿಕೆ

  |

  ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಅಗತ್ಯ ಪ್ರಮಾಣದಲ್ಲಿ ಲಸಿಕೆ ಸರಬರಾಜು ಆಗುತ್ತಿಲ್ಲವಾದ್ದರಿಂದ ಲಸಿಕೆಗಾಗಿ ಕಾಯುವುದು, ಹುಡುಕಾಡುವುದು ಸಾಮಾನ್ಯವಾಗಿದೆ.

  ಇದೀಗ ಟಿವಿ ಅಸೋಸಿಯೇಷನ್‌ನವರು ಸರ್ಕಾರಕ್ಕೆ ಮನವಿ ಮಾಡಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‍ ನ ಎಲ್ಲ ಅಜೀವ ಸದಸ್ಯರಿಗೆ ಹಾಗೂ ಅವರ ಕುಟುಂಬದವರಿಗೆ (45 ವರ್ಷ ಮೇಲ್ಪಟ್ಟವರಿಗೆ) ಉಚಿತ ಲಸಿಕೆ ವ್ಯವಸ್ಥೆ ಮಾಡಿದೆ.

  ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಂವಿ ಶಿವಕುಮಾರ್ ಅವರು ಕಂದಾಯ ಸಚಿವ ಆರ್.ಅಶೋಕ್ ಕುಮಾರ್ ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಿ ಕಿರುತೆರೆ ಕಲಾವಿದರಿಗೆ ಸಾಮೂಹಿಕವಾಗಿ ಲಸಿಕೆ ನೀಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಸರ್ಕಾರವು ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸುವ 45 ವರ್ಷ ಮೇಲ್ಪಟ್ಟ ಕಲಾವಿದರಿಗೆ ತಂತ್ರಜ್ಞರಿಗೆ ಉಚಿತ ಲಸಿಕೆಯನ್ನು ಮೇ 18 ರಿಂದ ಮೇ 20 ರ ವರೆಗೆ ಹಾಕಿಸಿಕೊಳ್ಳಬಹುದು. ಲಸಿಕೆ ಹಾಕಿಸಿಕೊಳ್ಳುವವರು ಟೆಲಿವಿಷನ್ ಅಸೋಸಿಯೇಷನ್‌ನ ಅಜೀವ ಸದಸ್ಯರಾಗಿರಬೇಕು.

  ಚಿತ್ರರಂಗದವರಿಗೂ ಉಚಿತವಾಗಿ, ಸಾಮೂಹಿಕವಾಗಿ ಲಸಿಕೆ ಅಭಿಯಾನ ನಡೆಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ನಾಗಣ್ಣ, ನಿರ್ಮಾಪಕ ಸಾರಾ ಗೋವಿಂದು, ಖಜಾಂಚಿ ವೆಂಕಟೇಶ್ ಅವರ ನಿಯೋಗ ಮೇ 17 ರಂದು ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥರು ಮಾಡಿರುವ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

  English summary
  Government agreed to give free vaccination for 45 above aged Tv artists and technicians.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X