For Quick Alerts
  ALLOW NOTIFICATIONS  
  For Daily Alerts

  ಈ ವಾರ ನಿಮ್ಮ ಮನೆಯಂಗಳದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

  By Suneetha
  |

  ಸ್ಯಾಂಡಲ್ ವುಡ್ ಬಾಕ್ಸಾಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ವಾರ ಟಿವಿ ರಿಯಾಲಿಟಿ ಶೋ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

  ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸೃಜನ್ ಲೋಕೇಶ್ ನಿರೂಪಣೆಯಲ್ಲಿ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ಮಜಾ ಟಾಕೀಸ್' ನ 50ನೇ ಎಪಿಸೋಡ್ ನಲ್ಲಿ ಸ್ಪೆಷಲ್ ಗೆಸ್ಟ್ ಆಗಿ ಕಾಣಿಸಿಕೊಂಡಿದ್ದಾರೆ.

  ಈ ಮೊದಲು 'ಕಾಸ್ ಗೆ ಟಾಸ್' ಎಂಬ ರಿಯಾಲಿಟಿ ಶೋನಲ್ಲಿ ದರ್ಶನ್ ಭಾಗವಹಿಸಿದ್ದು, ಇದೀಗ ಮತ್ತೋಮ್ಮೆ 'ಮಜಾ ಟಾಕೀಸ್' ಮೂಲಕ ಕಿರುತೆರೆಗೆ ಅಡಿಯಿಟ್ಟಿದ್ದಾರೆ.

  ಆಗಸ್ಟ್ 15 ಹಾಗೂ 16 ರಂದು ರಾತ್ರಿ 8.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಲೋಕೇಶ್ ಪ್ರೊಡಕ್ಷನ್ಸ್ ಅರ್ಪಿಸುವ 'ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ಸೃಜನ್ ಲೋಕೇಶ್ ಆಪ್ತಮಿತ್ರ ನಟ ದರ್ಶನ್ ತೂಗುದೀಪ್ ಭಾಗವಹಿಸಿದ್ದರು. [ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ]

  ಈಗಾಗಲೇ ಕಾರ್ಯಕ್ರಮದ ಶೂಟಿಂಗ್ ಮುಗಿದಿದ್ದು, ಇದೇ ಶನಿವಾರ ಹಾಗೂ ಭಾನುವಾರ ನಿಮ್ಮ ನೆಚ್ಚಿನ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿದೆ.

  ಇನ್ನೂ ದರ್ಶನ್ ಜೊತೆ ಹಾಸ್ಯನಟ ಬುಲ್ಲೆಟ್ ಪ್ರಕಾಶ್ ಹಾಗೂ ಖ್ಯಾತ ಕಲಾವಿದ ವಿಲಾಸ್ ನಾಯಕ್ ಭಾಗವಹಿಸಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಬಹುನಿರೀಕ್ಷಿತ ಚಿತ್ರ 'ಮಿಸ್ಟರ್ ಐರಾವತ' ದ ಬಗ್ಗೆ ಮಾತನಾಡಿದ್ದಾರೆ.

  'ನವಗ್ರಹ' ಚಿತ್ರದಲ್ಲಿ ದರ್ಶನ್ ಹಾಗೂ ಸೃಜನ್ ಲೋಕೇಶ್ ಒಂದಾಗಿ ಕಾಣಿಸಿಕೊಂಡಿದ್ದರು. ಇಂಡಸ್ಟ್ರಿಯಲ್ಲಿ ಮಾತ್ರವಲ್ಲದೇ ರಿಯಲ್ ಲೈಫ್ ನಲ್ಲೂ ಉತ್ತಮ ಗೆಳೆಯರಾಗಿರುವ ಇವರು 'ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ಕೆಲವೊಂದು ಹಾಸ್ಯ ವಿಚಾರಗಳನ್ನು ಪ್ರೇಕ್ಷಕರೆದುರು ತೆರೆದಿಟ್ಟಿದ್ದಾರೆ.

  ಅದೇನೇ ಇರಲಿ ನೀವು ದರ್ಶನ್ ಅಭಿಮಾನಿಗಳಾಗಿದ್ದರೆ ಈ ವಾರ ತಪ್ಪದೇ ಕಲರ್ಸ್ ಕನ್ನಡ ನೋಡಿ ನಿಮ್ಮ ನೆಚ್ಚಿನ ಹೀರೋನ ಕಾರ್ಯಕ್ರಮ ವೀಕ್ಷಿಸಿ.

  English summary
  Challenging Star Darshan participated in a guest in the popular reality show 'Maja Talkies' being aired in Colors Kannada. Darshan is the chief guest of the 50th episode of the 'Maja Talkies' being anchored and directed by Srujan Lokesh.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X