ನೈಟ್ ಕರ್ಪ್ಯೂ ರೂಲ್ಸ್ ಬ್ರೇಕ್: ಎಣ್ಣೆ ಏಟಿನಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ರಂಪಾಟ

ಕರ್ನಾಟಕದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಹೊಸ ತಳಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಆತಂಕ ಸೃಷ್ಟಿಯಾಗುತ್ತಿದೆ. ಇದೇ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮವಿರುವುದರಿಂದ ಜನರು ಗುಂಪು ಸೇರುತ್ತಾರೆಂಬ ಕಾರಣಕ್ಕೆ ನೈಟ್ ಕರ್ಪ್ಯೂವನ್ನು ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ಸುಮಾರು 10 ದಿನಗಳ ಕಾಲ ನೈಟ್ ಕರ್ಫ್ಯೂ ಇರುತ್ತದೆಂದು ಆದೇಶ ಹೊರಡಿಸಿದೆ. ಹೀಗಾಗಿ ರಾತ್ರಿ 10 ಗಂಟೆ ಮೇಲೆ ಯಾರು ಓಡಾಡದಂತೆ ಪೊಲೀಸರು ನಿಗಾವಹಿಸಿದ್ದಾರೆ.

ಎಂ ಜಿ ರಸ್ತೆ ರಾತ್ರಿ ವೇಳೆ ಜಗಮಗಿಸುತ್ತಿರುತ್ತದೆ. ಸೆಲೆಬ್ರೆಟಿಗಳು ಐಶಾರಾಮಿ ಹೊಟೇಲ್‌ಗಳಲ್ಲಿ ಪಾರ್ಟಿ ಮಾಡುವುದು ಇಲ್ಲ ಕಾಮನ್. ಆದರೆ, ನಿನ್ನೆ (ಡಿಸೆಂಬರ್ 28) ನೈಟ್ ಕರ್ಪ್ಯೂ ಜಾರಿ ಗೊಳಿಸಿದ ಮೊದಲ ದಿನವಾಗಿದ್ದರಿಂದ ಪೊಲೀಸರು ಎಂ ಜಿ ರಸ್ತೆಯಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ಕುಡಿದ ಮತ್ತಿನಲ್ಲಿ ರಂಪಾಟ ಮಾಡಿದ ಘಟನೆ ನಡೆದಿದೆ.

ಎಣ್ಣೆ ಏಟಿನಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ರಂಪಾಟ

ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಎಂಜಿ ರಸ್ತೆಯಲ್ಲಿ ಸ್ನೇಹಿತರೊಂದಿಗೆ ಇದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಗುಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಕರ್ಫ್ಯೂ ಜಾರಿಯಾದ ಸಂದರ್ಭದಲ್ಲಿ ಯಾರೂ ಹೊರಗೆ ಬರುವಂತಿಲ್ಲವೆಂದು ಕಠಿಣ ಆದೇಶವನ್ನು ಜಾರಿ ಮಾಡಲಾಗಿದೆ. ಹೀಗಾಗಿ ಪೊಲೀಸರು ಕೂಡ ಕಟ್ಟೆಚ್ಚರ ವಹಿಸುದ್ದಾರೆ. ಹೀಗಿದ್ದರೂ ಕನ್ನಡ ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಎಂಜಿ ರಸ್ತೆಯಲ್ಲಿ ಸ್ನೇಹಿತರೊಂದಿಗಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ದಿವ್ಯ ಸುರೇಶ್ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

Kannada Biggboss fame actress divya suresh kirik in mg road and violated night curfew rules

ಮನೆಗೆ ಹೋಗಿ ಎಂದಿದ್ದಕ್ಕೆ ದಿವ್ಯ ಸುರೇಶ್ ರಂಪಾಟ ಮಾಡಿದ್ದಾರೆ.

ಡಿಸೆಂಬರ್ 28ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿದೆ. 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ತಂದಿದ್ದು, ನಿನ್ನೆ (ಡಿಸೆಂಬರ್ 28) ಮೊದಲ ದಿನವಾಗಿತ್ತು. ಹೀಗಾಗಿ ಪೊಲೀಸರು ನೈಟ್‌ ಕರ್ಫ್ಯೂ ಜಾರಿಯಲ್ಲಿದೆ. ಮನೆಗೆ ಹೋಗಿ ಎಂದು ದಿವ್ಯ ಸುರೇಶ್ ಹಾಗೂ ಸ್ನೇಹಿತರಿಗೆ ಹೇಳಿದ್ದಾರೆ. ಪೊಲೀಸರು ಹೀಗೆ ಹೇಳುತ್ತಿದ್ದಂತೆ ದಿವ್ಯ ಸುರೇಶ್ ಪೊಲೀಸರಿಗೇ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಪೊಲೀಸರ ಜೊತೆ ಕಿತ್ತಾಡುವಾಗ ದಿವ್ಯಾ ಸುರೇಶ್ ಮಾಧ್ಯಮಗಳ ಕ್ಯಾಮರಾ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಬಳಿಕ ಆಟೋ ಹತ್ತಿ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ.

Kannada Biggboss fame actress divya suresh kirik in mg road and violated night curfew rules

ದಿವ್ಯ ಸುರೇಶ್ ಬಿಗ್‍ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಪಾವಗಡ ಮಂಜು ಹಾಗೂ ದಿವ್ಯ ಸುರೇಶ್ ಜೋಡಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಜನರನ್ನು ರಂಜಿಸಿತ್ತು. ಆದರೆ, ದಿವ್ಯ ಸುರೇಶ್ ಬಿಗ್ ಬಾಸ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಹೀಗಾಗಿ 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿತ್ತು. ಆದರೂ, ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ದಿವ್ಯಾ ಸುರೇಶ್ ಹೆಚ್ಚು ಜನಪ್ರಿಯವಾಗಿದ್ದರು. ಸೋಶಿಯಲ್ ಮೀಡಿಯಾಗಳಲ್ಲೂ ಆಕ್ಟೀವ್ ಆಗಿರುತ್ತಿದ್ದ ದಿವ್ಯ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡು ಸುದ್ದಿಯಲ್ಲಿದ್ದಾರೆ.

Kannada Biggboss fame actress divya suresh kirik in mg road and violated night curfew rules

ದೆಹಲಿ, ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳ

ಭಾರತದಲ್ಲಿ ಕೊರೊನಾ ಮೂರನೇ ಅಲೆ ಭೀತಿಯನ್ನು ಎದುರಿಸುತ್ತಿದೆ. ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಉಲ್ಭಣಗೊಂಡಿದ್ದು, ಶೇ. 50ರಷ್ಟು ಏರಿಕೆಯಾಗಿದೆ. ಹೀಗಾಗಿ ಈ ಎರಡೂ ರಾಜ್ಯಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಜಾರಿಗೆ ತಂದಿದೆ. ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಸಂದರ್ಭಗಳಲ್ಲಿ ರಜೆಗಳಿರುವುದರಿಂದ ಯುವಕ-ಯುವತಿಯರು ಪಾರ್ಟಿ ಮೂಡಿನಲ್ಲಿರುತ್ತಾರೆ. ಈ ಸಂದರ್ಭದಲ್ಲಿ ಸೋಂಕು ಹೆಚ್ಚಾಗದಂತೆ ಕಟ್ಟೆಚ್ಚರ ವಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

More from Filmibeat

English summary
Kannada Biggboss fame actress Divya Suresh kirk in mg road and violated night curfew rules. Police unhappy with the celebrity behavior.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X