twitter
    For Quick Alerts
    ALLOW NOTIFICATIONS  
    For Daily Alerts

    ಕನ್ನಡಕ್ಕೆ ಬಂತು ರಾಜಮೌಳಿಯ ಸೂಪರ್ ಹಿಟ್ 'ಮಗಧೀರ' ಚಿತ್ರ

    |

    ತೆಲುಗಿನ ಬ್ಲಾಕ್ ಬಸ್ಟರ್ ಮಗಧೀರ ಚಿತ್ರವನ್ನು ಕನ್ನಡದಲ್ಲಿ ನೋಡುವ ಅವಕಾಶ ಸಿಕ್ಕಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗಿದ್ದ ಈ ಚಿತ್ರ ಸೌತ್ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಹಿಟ್ ಆಗಿತ್ತು.

    ಮಗಧೀರ ಚಿತ್ರ ಕನ್ನಡದಲ್ಲಿ ಡಬ್ ಆಗಿದ್ದು, ಮಹಾಬಲಿ ಭೈರವ ಹೆಸರಿನಲ್ಲಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಇದೇ ಭಾನುವಾರ ಸಂಜೆ 6.30ಕ್ಕೆ ಉದಯ ಟಿವಿಯಲ್ಲಿ ಮಗಧೀರ ಕನ್ನಡ ವರ್ಷನ್ ಟೆಲಿಕಾಸ್ಟ್ ಆಗುತ್ತಿದೆ.

    ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನ

    2009ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ ನಾಯಕರಾಗಿ ಕಾಣಿಸಿಕೊಂಡಿದ್ದರು. ದ್ವಿಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದು, ಕಾಜಲ್ ಅಗರ್ ವಾಲ್ ನಾಯಕಿಯಾಗಿದ್ದರು. ದೇವ್ ಮತ್ತು ಶ್ರೀಹರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

    Magadheera dubbed as Mahabali Bhairava in Kannada

    ಅಲ್ಲು ಅರವಿಂದ್ ಮತ್ತು ಬಿವಿಎಸ್‌ಎನ್ ಪ್ರಸಾದ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸುಮಾರು 30 ಕೋಟಿ ವೆಚ್ಚದಲ್ಲಿ ಮಗಧೀರ ತಯಾರಾಗಿತ್ತು.

    ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಬಿಸಿನೆಸ್ ಮಾಡಿದ್ದ ಮಗಧೀರ ಸಿನಿಮಾ 150 ಕೋಟಿ ಅಧಿಕ ಹಣ ಗಳಿಸಿತ್ತು ಎಂದು ವರದಿಯಾಗಿದೆ. ರಾಜಮೌಳಿಯ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದು, ಎಂಎಂ ಕೀರವಾಣಿ ಸಂಗೀತ ನೀಡಿದ್ದರು.

    English summary
    Magadheera dubbed as Mahabali Bhairava in Kannada. To be telecast on Udaya TV this Sunday.
    Friday, December 4, 2020, 9:38
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X