ಕನಸಿನ ರಾಣಿ ಮಾಲಾಶ್ರೀ ಮನೆಯಲ್ಲಿ ದೀಪಾವಳಿ ಸಂಭ್ರಮ: ಬೆಳಕಿನ ಹಬ್ಬಕ್ಕೆ ಅಮ್ಮ -ಮಗಳ ಫೋಟೊಶೂಟ್
ಬೆಳಕಿನ ಹಬ್ಬ ದೀಪಾವಳಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅಂತೆಯೇ ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ ಕೂಡ ಮನೆ ಮಾಡಿದೆ. ಸಿನಿಮಾ ತಾರೆಯರು ಕೂಡ ಈ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಆ ಫೋಟೊಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.
ಈ ಬಾರಿ ದೀಪಾವಳಿ ಕನಸಿನ ರಾಣಿ ಮಾಲಾಶ್ರೀಗೂ ತುಂಬಾನೇ ಸ್ಪೆಷಲ್. ಯಾಕಂದ್ರೆ, ಮಗಳು ಆರಾಧನಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂತಹ ಸೂಪರ್‌ಸ್ಟಾರ್‌ಗೆ ನಾಯಕಿಯಾಗಿ ನಟಿಸಿದ್ದಾರೆ. ಹೀಗಾಗಿ ಮಾಲಾಶ್ರೀಗೆ ಈ ಹಬ್ಬ ತುಂಬಾನೇ ಸ್ಪೆಷಲ್.

ಈ ಕಾರಣಕ್ಕೆ ಬೆಳಕಿನ ಹಬ್ಬವನ್ನು ಅಮ್ಮ ಮತ್ತು ಮಗಳು ವಿಶೇಷವಾಗಿ ಸಂಭ್ರಮಿಸಿದ್ದಾರೆ. ಪಕ್ಕಾ ಟ್ರೆಡಿಷನಲ್ ಲುಕ್‌ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ ಇಬ್ಬರೂ ಒಂದೇ ಫ್ರೇಮ್‌ನಲ್ಲಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಕ್ಯಾಮರಾಗೆ ಅಮ್ಮ ಮಗಳು ಕ್ಯಾಮರಾಗೆ ಕೊಟ್ಟಿರೋ ಪೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

"ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್ ಮಾಡಿಸಿಕೊಂಡಿದ್ದೀನಿ. ಮಗಳ ಜೊತೆಗೆ ಫೋಟೊ ಶೂಟ್ ಮಾಡಿಸಿಕೊಂಡಿರುವುದು ಹೆಚ್ಚು ಖುಷಿಯಾಗಿದೆ. ಈ ವರ್ಷ ನನ್ನ ಮಗಳು 'ಕಾಟೇರ' ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾಳೆ. ನನಗೆ ತಾವು ನೀಡಿರುವ ಪ್ರೋತ್ಸಾಹ ನನ್ನ ಮಗಳಿಗೂ ನೀಡಿ" ಎಂದು ನಟಿ ಮಾಲಾಶ್ರೀ ಈ ಸಂದರ್ಭದಲ್ಲಿ ನಾಡಿನ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.


Click it and Unblock the Notifications











