»   » ಪಬ್ಲಿಕ್ ಟಿವಿ ಸಮೂಹದ 'ಪಬ್ಲಿಕ್ ಕಾಮಿಡಿ/ಮೂವೀಸ್' ಫೆ.12ಕ್ಕೆ ಆರಂಭ

ಪಬ್ಲಿಕ್ ಟಿವಿ ಸಮೂಹದ 'ಪಬ್ಲಿಕ್ ಕಾಮಿಡಿ/ಮೂವೀಸ್' ಫೆ.12ಕ್ಕೆ ಆರಂಭ

By: ಒನ್ಇಂಡಿಯಾ/ಫಿಲ್ಮಿಬೀಟ್ ಕನ್ನಡ ಡೆಸ್ಕ್
Subscribe to Filmibeat Kannada

ಕರ್ನಾಟಕದಲ್ಲಿ ಮನೆ ಮಾತಾಗಿರುವ ಪಬ್ಲಿಕ್ ಟಿವಿ ಈಗ ಸಿಸಿಮಾ ಕ್ಷೇತ್ರಕ್ಕೂ ಕಾಲಿಡುತ್ತಿದೆ. ರೈಟ್ ಮೆನ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಮೂಹದಿಂದ ಆರಂಭವಾಗಲಿರುವ 'ಪಬ್ಲಿಕ್ ಕಾಮಿಡಿ/ಮೂವೀಸ್' ಚಾನೆಲ್ ಫೆ.12ರಂದು ಲೋಕಾರ್ಪಣೆಗೊಳ್ಳಲಿದೆ.

ಎಚ್.ಆರ್.ರಂಗನಾಥ್ ನೇತೃತ್ವದ ಪಬ್ಲಿಕ್ ಕಾಮಿಡಿ/ಮೂವೀಸ್ ಚಾನೆಲ್ ಉದ್ಘಾಟನೆಗೆ ಚಿತ್ರರಂಗದ ಪ್ರಮುಖ ಗಣ್ಯರು ಆಗಮಿಸಿ ಶುಭ ಕೋರಲಿದ್ದಾರೆ. ರೈಟ್ ಮೆನ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಡಿ ಆರಂಭವಾದ ಪಬ್ಲಿಕ್ ಟಿವಿ ಕೂಡಾ ಫೆಬ್ರವರಿ 12ರಂದು 6ನೇ ವರ್ಷದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ.

2012ರ ಫೆಬ್ರವರಿ 12ರಂದು ಪಬ್ಲಿಕ್ ಟಿವಿ ಲೋಕಾರ್ಪಣೆಗೊಂಡಿತ್ತು. ಬಳಿಕ 2014ರ ಸೆಪ್ಟೆಂಬರ್ 28ರಂದು ಪಬ್ಲಿಕ್ ಮ್ಯೂಸಿಕ್ ವಾಹಿನಿ ಆರಂಭಗೊಂಡಿತ್ತು.

Public Movies Comedy to get launched on February 12th

2012ರಲ್ಲಿ ಆರಂಭಗೊಂಡ ಪಬ್ಲಿಕ್ ಟಿವಿ ಹಾಗೂ 2014ರಲ್ಲಿ ಆರಂಭಗೊಂಡ ಪಬ್ಲಿಕ್ ಮ್ಯೂಸಿಕ್ ವಾಹಿನಿ ರಾಜ್ಯದ ಮೂಲೆ ಮೂಲೆಯಲ್ಲೂ ಮನೆ ಮಾತಾಗಿದೆ. ಇದಕ್ಕೆ ಕಾರಣಕರ್ತರಾದ ಜನರಿಗೆ ನಾವು ಆಭಾರಿ. ಈ ಹಿಂದೆ ಎರಡು ಚಾನೆಲ್‍ಗಳನ್ನು ಕೈ ಹಿಡಿದಂತೆಯೇ ಪಬ್ಲಿಕ್ ಕಾಮಿಡಿ/ಮೂವೀಸ್ ವಾಹಿನಿಯನ್ನು ಕೂಡಾ ಸ್ವೀಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ನಮ್ಮ ಮೇಲೆ ವಿಶ್ವಾಸವಿಟ್ಟ ಎಲ್ಲಾ ಕನ್ನಡಿಗರಿಗೂ ಧನ್ಯವಾದ ಎಂದು ಪಬ್ಲಿಕ್ ಟಿವಿ, ಮ್ಯೂಸಿಕ್ ಚಾನೆಲ್ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಹೇಳಿದ್ದಾರೆ.

Public Movies Comedy to get launched on February 12th

ಪಬ್ಲಿಕ್ ಕಾಮಿಡಿ/ಮೂವೀಸ್ ಚಾನೆಲ್ ನಲ್ಲಿ ನೀವು 24 ಗಂಟೆಗಳ ಕಾಲವೂ ಕನ್ನಡ ಸಿನಿಮಾಗಳನ್ನು ನೋಡಿ ಆನಂದಿಸಬಹುದು. ನಿಮ್ಮೂರಲ್ಲಿ ಪಬ್ಲಿಕ್ ಕಾಮಿಡಿ/ಮೂವೀಸ್ ನಿಮಗೆ ವೀಕ್ಷಣೆಗೆ ಲಭ್ಯವಾಗದಿದ್ದರೆ ನೀವು ನಿಮ್ಮ ಕೇಬಲ್ ಆಪರೇಟರ್‍ಗಳನ್ನು ಸಂಪರ್ಕಿಸಬಹುದು. ಫೆಬ್ರವರಿ 16ರಂದು ಫ್ರೈಡೇ ರಿಲೀಸ್ ಹೆಸರಲ್ಲಿ ಅಧಿಕೃತವಾಗಿ ಸಿನಿಮಾಗಳ ಪ್ರಸಾರ ಆರಂಭವಾಗಲಿದೆ.

English summary
New Kannada GEC Channel, Public Movies/Comedy is all set to go on air from February 12th, Monday.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada