ಕಿರುತೆರೆಯಲ್ಲಿ ಪವರ್ ಸ್ಟಾರ್ ಅಬ್ಬರ: 'ಡಿಕೆಡಿ'ಯಲ್ಲಿ ಅಪ್ಪು ಡಾನ್ಸ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಜೇಮ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಜೇಮ್ಸ್ ಸಿನಿಮಾ ಕಾಶ್ಮೀರದಲ್ಲಿ ಚಿತ್ರೀಕರಣ ನಡೆಯುತ್ತಿದೆ.
ಇತ್ತೀಚಿಗಷ್ಟೆ ಕಾಶ್ಮೀರ ಚಿತ್ರೀಕರಣದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ಅಪ್ಪು ಕಾಶ್ಮೀರ ಜನರ ಜೊತೆ ಮಾತನಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಂದಹಾಗೆ ಅಪ್ಪು ಕಾಶ್ಮೀರ ಪ್ರವಾಸ ಬೆಳೆಸುವ ಮೊದಲೇ ಕಿರುತೆರೆಯ ಒಂದು ಕಾರ್ಯಕ್ರಕ್ಕೆ ಗೆಸ್ಟ್ ಆಗಿ ಎಂಟ್ರಿ ಕೊಟ್ಟಿದ್ದರು.
ಹೌದು, ಕನ್ನಡ ಕಿರುತೆರೆಯ ಪ್ರಸಿದ್ಧ ಡಾನ್ಸ್ ರಿಯಾಲಿಟಿ ಶೋ ಡಾನ್ಸ್ ಕರ್ನಾಟಕ ಡಾನ್ಸ್ ಶೋನಲ್ಲಿ ಅಪ್ಪು ಭಾಗಿಯಾಗಿದ್ದಾರೆ. ನಟಿ ರಕ್ಷಿತಾ, ವಿಜಯ್ ರಾಘವೇಂದ್ರ, ಅರ್ಜುನ್ ಜನ್ಯ ಜಡ್ಜ್ ಆಗಿ ಕಾಣಿಸಿಕೊಂಡಿರುವ ಡಿಕೆಡಿ ರಿಯಾಲಿಟಿ ಶೋನಲ್ಲಿ ಪುನೀತ್ ರಾಜ್ ಕುಮಾರ್ ವಿಶೇಷ ಗೆಸ್ಟ್ ಆಗಿ ಕಾಣಿಸಿಕೊಂಡಿದ್ದಾರೆ.

ಪುನೀತ್ ಅತಿಥಿಯಾಗಿ ಎಂಟ್ರಿ ಕೊಟ್ಟಿರುವ ಸಂಚಿಕೆ ಇದೇ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿದೆ. ಈಗಾಗಲೇ ಅಪ್ಪು ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುನೀತ್ ಡಿಕೆಡಿ ಜಡ್ಜ್ ಗಳ ಜೊತೆ ನಿಂತು ಕ್ಯಾಮರಾಗೆ ಪೋಸ್ ನೀಡಿದ್ದಾರೆ.
ಅಪ್ಪು ಅಬ್ಬರ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ವೇದಿಕೆ ಮೇಲೆ ಅಪ್ಪು ಸಹ ಡಾನ್ಸ್ ಮಾಡಿದ್ದಾರಾ ಎಂದು ನೋಡಲು ಶನಿವಾರದವರೆಗೂ ಕಾಯಲೇ ಬೇಕು.
ಪುನೀತ್ ಸದ್ಯ ಬಹುನಿರೀಕ್ಷೆಯ ಯುವರತ್ನ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಮೋಡಿ ಮಾಡುತ್ತಿರುವ ಯುವರತ್ನ ಏಪ್ರಿಲ್ 1ಕ್ಕೆ ತೆರೆಗೆ ಬರುತ್ತಿದೆ.


Click it and Unblock the Notifications










