Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂ. 27ಕ್ಕೆ ರೂಪಾ ಅಯ್ಯರ್ 'ಚಂದ್ರ' ರಿಲೀಸ್
ಮನೆಮಂದಿಯಲ್ಲಾ ಒಟ್ಟಾಗಿ ಕುಳಿತು ನೋಡುವ ಚಿತ್ರಗಳು ಈಗ ಅಪರೂಪಕ್ಕೆ ಎಂಬಂತೆ ಬರುತ್ತಿರುತ್ತವೆ. ಅಂತಹದ್ದೇ ಒಂದು ಅಪರೂಪದ ಪ್ರಯತ್ನ 'ಚಂದ್ರ' ಚಿತ್ರ. ರೂಪಾ ಅಯ್ಯರ್ ನಿರ್ದೇಶನದ ಈ ಚಿತ್ರ ಇದೇ ಜೂನ್ 27ಕ್ಕೆ ಬಿಡುಗಡೆಯಾಗುತ್ತಿದೆ.
ಈ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಸಕುಟುಂಬ ಸಪರಿವಾರ ಸಮೇತ ನೋಡುವ ಚಿತ್ರವಾಗಿ 'ಯು' ಸರ್ಟಿಫಿಕೇಟ್ ನೀಡಿದೆ. ವಿಧಾನಸಭೆ ಚುನಾವಣೆ ಬಳಿಕ ತಮ್ಮ ಕಲಾಕೃತಿ 'ಚಂದ್ರ' ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ರೂಪಾ ಅಯ್ಯರ್ ಅವರು ತಿಳಿಸಿದ್ದರು. ಅವರ ಯೋಜನೆಯಂತೆ ಚಿತ್ರ ಈಗ ಬಿಡುಗಡೆಯಾಗುತ್ತಿದೆ.
'ಚಂದ್ರ' ಚಿತ್ರದ ವಿಶೇಷಗಳು ಒಂದೆರಡಲ್ಲ. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಮಾದಕ ಬೆಡಗಿ ಶ್ರೀಯಾ ಸರನ್. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಿಸಿರುವ ದ್ವಿಭಾಷಾ ಚಿತ್ರವಿದು. 'A Royal Love Story' ಎಂಬುದು ಚಿತ್ರದ ಅಡಿಬರಹ.
ಈ ಕಲೆಯನ್ನು ಮೂರು ನಾಲ್ಕು ತಿಂಗಳ ಕಾಲ ಅಭ್ಯಾಸ ಮಾಡಿದ್ದಾರೆ ಚಿತ್ರದ ನಾಯಕ ನಟ ಲವ್ಲಿ ಸ್ಟಾರ್ ಪ್ರೇಮ್ ಕುಮಾರ್. ಮೈಸೂರು ಮೋಹನ್ ಪುತ್ರ ಶ್ರೀವತ್ಸ್ ಚಿತ್ರಕ್ಕೆ ಸಂಗೀತ ನೀಡಿದ್ದು ಪಿ.ಕೆ.ಎಚ್.ದಾಸ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಐತಿಹಾಸಿಕ ಪಾತ್ರಗಳಲಿ ನಟಿಸಬೇಕು ಎಂಬುದು ನನ್ನ ಬಹುದಿನದ ಕನಸಾಗಿತ್ತು. ಚಂದ್ರ ಚಿತ್ರದ ಮೂಲಕ ನನ್ನ ಕನಸು ನನಸಾಗಿದೆ. ಶ್ರೀಯಾ ಶರಣ್ ಅಭಿಮಾನಿಯಾದ ನಾನು, ಅವರೊಂದಿಗೆ ನಟಿಸಿರುವುದು ಸಂತಸ ತಂದಿದೆ ಎಂದಿದ್ದಾರೆ ಪ್ರೇಮ್. ಚಿತ್ರದ ಹಾಡುಗಳಿಗೂ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಚಂದ್ರ ಧ್ವನಿಸುರುಳಿ ವಿಮರ್ಶೆ ಓದಿ. (ಒನ್ಇಂಡಿಯಾ ಕನ್ನಡ)