ಉದಯ ಟಿವಿಯಲ್ಲಿ ಪಕ್ಕಾ ಮನರಂಜನೆಯ ಶೋ 'ಸವಾಲ್ ಗೆ ಸೈ'

By Harshitha

ನಿಮ್ಮ ನೆಚ್ಚಿನ ಉದಯ ಟಿವಿಯಲ್ಲಿ ಇದೇ ಶನಿವಾರದಿಂದ ಹೊಸ ಶೋ ಶುರುವಾಗಲಿದೆ. ಅದೇ 'ಸವಾಲ್ ಗೆ ಸೈ'. ಮನರಂಜನೆಯೇ ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಸವಾಲು ಜವಾಬುಗಳ ಜುಗಲ್ಬಂದಿಯಾಗಿ ತೆರೆಯಮೇಲೆ ಇದೊಂದು ಹೊಸ ರೀತಿಯ, ವಿನೂತನ ರಿಯಾಲಿಟಿ ಶೋ ಆಗಿ ಮೂಡಿಬರಲಿದೆ.

'ಸವಾಲ್ ಗೆ ಸೈ' ಕಾರ್ಯಕ್ರಮದಲ್ಲಿ ಹಿರಿತೆರೆ ಮತ್ತು ಕಿರುತೆರೆಯ ತಾರೆಯರು ಭಾಗವಹಿಸಲಿದ್ದಾರೆ.

ಆಟದಲ್ಲಿ ಎರಡು ತಂಡಗಳಿದ್ದು, ಪ್ರತಿ ತಂಡದಿಂದ ನಾಲ್ಕು ಜನ ಸ್ಪರ್ಧಿಸುತ್ತಾರೆ. ಸವಾಲುಗಳಿಗೆ ಜವಾಬು ಕೊಡಲು ತಾರೆಯರ ಪರದಾಟ, ಸೆಣೆಸಾಟ, ಜೊತೆಗೆ ಒಂದಿಷ್ಟು ಹುಡುಗಾಟವನ್ನೂ ನಾವು ನೋಡಬಹುದು. ಜವಾಬು ನೀಡಲಾಗದಿದ್ದರೆ ಮಜಾ ನೀಡುವಂತಹ ಸಜೆಗಳನ್ನು ನೀಡಲಾಗುವುದು. ಗೆಲುವು ಸೋಲಿಗಿಂತ ಇಲ್ಲಿ ಕೊಡುವ ಕ್ರಿಯಾಶೀಲ ಸವಾಲುಗಳನ್ನು ಎದುರಿಸಲು ತಾರೆಯರು ಬರುತ್ತಿರುವುದು ಒಂದು ವಿಶೇಷ.

Savalge Sye: New reality show in Udaya TV on every Saturday 9PM

ಹಿರಿಯರಿಂದ ಕಿರಿಯರವರೆಗೂ ಮನೆಮಂದಿಯೆಲ್ಲಾ ಕೂತು ನೋಡುವಂತಹ ಶೋ 'ಸವಾಲ್ ಗೆ ಸೈ'.

ಹಿರಿತೆರೆ ಮತ್ತು ಕಿರುತೆರೆ... ಎರಡರಲ್ಲೂ ತನ್ನ ನಟನೆಯಿಂದ ಮನೆಮಾತಾಗಿರುವ ನಿತ್ಯ ರಾಮ್, ಇದೇ ಮೊದಲ ಬಾರಿಗೆ 'ಸಾವಲ್ ಗೆ ಸೈ' ಕಾರ್ಯಕ್ರಮದ ನಿರೂಪಕಿಯಾಗಿದ್ದಾರೆ. ಜೊತೆಗೆ ತನ್ನ ಮಾತಿನಿಂದಲೇ ನಗುವಿನ ಹೊಳೆ ಹರಿಸುವ ನಿರಂಜನ್ ದೇಶಪಾಂಡೆ ಸಹ ನಿರೂಪಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ.

'ಸವಾಲ್ ಗೆ ಸೈ' ಪ್ರತಿ ಶನಿವಾರ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿದೆ.

More from Filmibeat

English summary
Savalge Sye: A New reality show in Udaya TV on every Saturday 9PM
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X