Raji Serial: ಶುರುವಾಗುತ್ತಿದೆ ಹೊಸ ಧಾರಾವಾಹಿ 'ರಾಜಿ', ನಟರು ಯಾರ್ಯಾರು?
ವಿಭಿನ್ನ ಧಾರಾವಾಹಿ ಮತ್ತು ಕಾರ್ಯಕ್ರಮಗಳ ಮೂಲಕ ಜನರನ್ನು ರಂಜಿಸುತ್ತ ಬಂದಿರುವ ಸ್ಟಾರ್ ಸುವರ್ಣ ವಾಹಿನಿ ಇದೀಗ ಹೊಸ ಕಥೆಯನ್ನು ಹೊತ್ತು ತಂದಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸ ಧಾರವಾಹಿ ಶುರುವಾಗುತ್ತಿದ್ದು, ಅದರ ಹೆಸರು ರಾಜಿ. ಕರ್ಣ ಮತ್ತು ರಾಜೇಶ್ವರಿಯ ಪ್ರೀತಿ ಮತ್ತು ಸ್ನೇಹದ ಕುರಿತಾದ ಈ ಧಾರಾವಾಹಿ ಉತ್ತಮ ಕತೆಯ ಜೊತೆಗೆ, ಅದ್ಭುತ ಕಲಾವಿದರ ತಂಡ ಹೊಂದಿದ್ದು, ಅದರ ಪ್ರೊಮೋ ಈಗಾಗಲೇ ಸದ್ದು ಮಾಡುತ್ತಿದೆ.
ಅಲ್ಲದೇ, ಕನ್ನಡ ಕಿರುತೆರೆ ವೀಕ್ಷಕರಲ್ಲಿ ಈ ಧಾರಾವಾಹಿಯ ಬಗ್ಗೆ ಈಗಾಗಲೇ ಕುತೂಹಲ ಹೆಚ್ಚಾಗಿದ್ದು, ಯಾವಾಗ ಆರಂಭವಾಗುತ್ತದೆ ಎಂಬುದನ್ನ ಕಾತುರದಿಂದ ಕಾಯುತ್ತಿದ್ದಾರೆ. ಧಾರಾವಾಹಿಯ ಪ್ರೊಮೋ ಈಗಾಗಲೇ ಸದ್ದು ಮಾಡುತ್ತಿದೆ. ಅಲ್ಲದೇ, ಕನ್ನಡ ಕಿರುತೆರೆ ವೀಕ್ಷಕರಲ್ಲಿ ಈ ಧಾರಾವಾಹಿಯ ಬಗ್ಗೆ ಈಗಾಗಲೇ ಕುತೂಹಲ ಹೆಚ್ಚಾಗಿದ್ದು, ಯಾವಾಗ ಆರಂಭವಾಗುತ್ತದೆ ಎಂಬುದನ್ನ ಕಾತುರದಿಂದ ಕಾಯುತ್ತಿದ್ದಾರೆ.
ತಂದೆ ತಾಯಿ ಇಲ್ಲದ ಮುಗ್ಧ ಹುಡುಗಿ ರಾಜಿಯನ್ನು ಭಾಸ್ಕರ್ ಮತ್ತು ಸರಸ್ವತಿ ಶಾನುಭೋಗ ದಂಪತಿ ತಮ್ಮ ಮನೆಯಲ್ಲೇ ಬೆಳಸಿರುತ್ತಾರೆ. ಭಾಸ್ಕರ್ ಶಾನುಭೋಗರು ರಾಜಿಯನ್ನು ತಮ್ಮ ಮನೆ ಮಗಳಂತೆ ಕಂಡರೂ, ಸರಸ್ವತಿ ಮತ್ತು ಶಾನುಭೋಗರ ಕಿರಿ ಮಗ ಕರ್ಣನನ್ನು ಹೊರತುಪಡಿಸಿ ಅವರ ಕುಟುಂಬದವರಿಗೆ ರಾಜಿ ಮನೆಕೆಲಸದಾಕೆ ಮಾತ್ರ.

ಭಾಸ್ಕರ್ ಶಾನುಭೋಗರಿಗೆ ಮೂವರು ಗಂಡು ಮಕ್ಕಳು ಮತ್ತು ಒಬ್ಬ ಮಗಳು. ಈ ಮೂವರಲ್ಲಿ ಮೊದಲನೆಯವನು ರವೀಶ್, ಮೃದು ಸ್ವಭಾವದ ಇವನಿಗೆ ತನ್ನ ಹೆಂಡತಿ ಶಾಂಭವಿ ಹೇಳಿದ್ದೆ ಕೊನೆಯ ಮಾತು ಎಂಬಂತೆ ಆಡುತ್ತಾರೆ. ಇನ್ನು ಎರಡನೇ ಮಗ ಉದಯ್ ತನ್ನ ಅತ್ತಿಗೆ ಶಾಂಭವಿ ತರಾನೇ ಸದಾ ತಂದೆಯ ಆಸ್ತಿ ಕಬಳಿಸುವ ಆಲೋಚನೆಯಲ್ಲಿ ಇರುತ್ತಾನೆ. ಇನ್ನು ಉದಯ್ ಪತ್ನಿ ದೇವಕಿ, ಶಾಂಭವಿ ಕೇಡಿತನದಲ್ಲಿ ಭಾಗಿಯಾಗಿದ್ರೂ ತನ್ನ ವಿಚಿತ್ರ ಬುದ್ಧಿಯಿಂದಾಗಿ ಒಂದಿಲ್ಲೊಂದು ಎಡವಟ್ಟು ಮಾಡಿಕೊಳ್ಳುತ್ತಿರುತ್ತಾಳೆ, ಒಂದು ರೀತಿಯಲ್ಲಿ ಕಾಮಿಡಿ ಪೀಸ್ ಎನ್ನಬಹುದು.
ಇನ್ನು ಶಂಕರ್ ಭಾಸ್ಕರ್ ಶಾನುಭೋಗರ ಮಗಳು ರೇಣು ಆಗಾಗ ತಂದೆಯ ಆಸ್ತಿಯಲ್ಲಿ ತನ್ನ ಪಾಲನ್ನು ಕೆಳುವ ಮನೆಯಲ್ಲಿ ಅಸಮಾಧಾನ ಸೃಷ್ಟಿ ಮಾಡುತ್ತಾಳೆ. ರೇಣು ಪತಿ ಮನೋಜ್ ಆರ್ಥಿಕವಾಗಿ ಶ್ರೀಮಂತನಲ್ಲದಿದ್ದರೂ, ಒಳ್ಳೆಯ ಮನಸಿನವನು ಎಂಬುದು ಸಹ ಇಲ್ಲಿ ಮುಖ್ಯ. ಸಾನ್ವಿ, ವಿರಾಟ್ ಮತ್ತು ಲಚ್ಚಜ್ಜಿಯ ಪಾತ್ರಗಳು, 'ರಾಜಿ' ಧಾರಾವಹಿಯ ಕತೆಯ ತಿರುವಿಗೆ ಕಾರಣವಾಗುತ್ತವೆ ಎಂಬ ಗುಟ್ಟನ್ನು ನಿರ್ದೇಶಕರು ಸಧ್ಯ ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಭಾಸ್ಕರ್ ಶಾನುಭೋಗರ ಕಿರಿಯ ಮಗ ಕರ್ಣ ಲಂಡನ್ನಿಗೆ ವಿದ್ಯಾಭ್ಯಾಸಕ್ಕಾಗಿ ಹೋಗಿರುತ್ತಾನೆ. ಈ ಕರ್ಣ ಮತ್ತು ರಾಜಿ ಬಾಲ್ಯದ ಗೆಳೆಯರು, ಕರ್ಣನಿಗೆ ಇದು ಸ್ನೇಹವಾಗಿದ್ದರೂ ರಾಜಿಗೆ ಕರ್ಣನ ಬಗ್ಗೆ ಸ್ನೇಹಕ್ಕೂ ಮಿಗಿಲಾದ ಭಾವವಿರುತ್ತದೆ. ಇವರಿಬ್ಬರ ಸ್ನೇಹ, ಪ್ರೀತಿಯಾಗಿ ಬದಲಾಗುತ್ತಾ ಅನ್ನೋದೆ 'ರಾಜಿ' ಧಾರಾವಾಹಿಯ ಕಥಾಹಂದರ ಎನ್ನಬಹುದು.
ರಾಜಿಯ ಪಾತ್ರದಲ್ಲಿ ಸೌಂದರ್ಯ ಎನ್ನುವ ಪ್ರತಿಭೆ ಕಾಣಿಸಿಕೊಳ್ಳುತ್ತಿದ್ದು, ಇನ್ನು ಕಾರ್ತಿಕ್ ಕರ್ಣನ ಪಾತ್ರದಲ್ಲಿದ್ದಾರೆ. ಹಿರಿಯ ನಟರಾದ ಮುಖ್ಯಮಂತ್ರಿ ಚಂದ್ರು ಮತ್ತು ವೈಜಯಂತಿ ಕಾಶಿ, ಭಾಸ್ಕರ್ ಮತ್ತು ಸರಸ್ವತಿ ಶಾನುಭೋಗರ ಪಾತ್ರವಹಿಸಿದ್ದಾರೆ.
ನೀನಾಸಂ ಅಶ್ವಥ್ ರಾಜಿಯ ತಂದೆ ವೀರೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ, ನಧಾಫ್ , ರಜನಿ, ಛಾಯಾ, ದಿನೇಶ್, ಸುಧಾ ಹೆಗ್ಡೆ, ಶಿಲ್ಪಾ, ಅಮೃತಾ ನಾಯ್ಕ್, ವಿನಾಯಕ ಮತ್ತು ಸಂದೀಪ್ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಶಾನುಭೋಗ ಮನೆತನದ ಪ್ರೀತಿಯ ಆಸ್ತಿ 'ರಾಜಿ', ಇಂದು ಸಂಜೆ 7.30ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.
Recommended Video



Click it and Unblock the Notifications