ನಟಿ ಶ್ವೇತಾ ಚೆಂಗಪ್ಪಗೆ ಕೊರೊನಾ ಪಾಸಿಟಿವ್
ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಎರಡನೇ ಅಲೆ ಮತ್ತೆ ಜನರಲ್ಲಿ ಆತಂಕ ಉಂಟು ಮಾಡುತ್ತಿದೆ. ಸಾಕಷ್ಟು ಮಂದಿ ಸಿನಿ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾದಿಂದ ಬಾಲಿವುಡ್ ನಲುಗಿ ಹೋಗಿದ್ದು, ಬಹುತೇಕ ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಇದೀಗ ಕನ್ನಡ ಕಿರುತೆರೆಯ ಖ್ಯಾತ ನಟಿ ಶ್ವೇತಾ ಚೆಂಗಪ್ಪ ಕೊರೊನಾ ಸೋಂಕಿಗೆ. ಈ ಬಗ್ಗೆ ಶ್ವೇತಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಮುನ್ನೆಚ್ಚರಿಕೆಯಿಂದ ಇದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ಎಲ್ಲಾ ಪ್ರೊಟೋಕಾಲ್ ಅನುಸರಿಸುತ್ತಿದ್ದೀನಿ. ಹೋಮ್ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಮೆಡಿಸಿನ್ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿ ಇದ್ದವರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಬರೆದುಕೊಂಡಿದ್ದಾರೆ.
ಶ್ವೇತಾ ತನ್ನ ಮುದ್ದಾದ ಮಗನ ಜೊತೆ ಸಮಯ ಕಳೆಯುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಶ್ವೇತಾ ಆಗಾಗ ಮಗನ ಜೊತೆ ಇರುವ ಫೋಟೋವನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿಗಷ್ಟೆ ಶ್ವೇತಾ ತಂದೆ-ತಾಯಿ ಕೊರೊನಾ ಸಲಿಕೆ ಪಡೆದಿದ್ದರು. ಲಸಿಕೆ ಪಡೆಯುತ್ತಿರುವ ಶ್ವೇತಾ ಫೋಟೋವನ್ನು ಹಂಚಿಕೊಂಡಿದ್ದರು.

ಸೃಜನ್ ಲೋಕೇಶ್ ನಡೆಸಿಕೊಡುವ ಮಜಾ ಟಾಕೀಸ್ ರಾಣಿಯಾಗಿ ಮಿಂಚಿದ್ದ ಶ್ವೇತಾ ಮಗನಿಗೆ ಜನ್ಮ ನೀಡಿದ ಬಳಿಕ ಕಿರುತೆರೆಯಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಮತ್ತೆ ಮಜಾ ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಇತ್ತೀಚಿಗಷ್ಟೆ ಶ್ವೇತಾ ವಿದೇಶಿ ಪ್ರವಾಸದಿಂದ ವಾಪಸ್ ಆಗಿದ್ದರು. ಪ್ರವಾಸದ ಫೋಟೋಗಳನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಇನ್ನು ಇತ್ತೀಚಿಗಷ್ಟೆ ಸ್ಯಾಂಡರಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಪಾಸಿಟಿವ್ ವರದಿ ಬಂದ ಬಳಿಕ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಿವುಡ್ ನಲ್ಲಿ ಅನೇಕ ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಅಕ್ಷಯ್ ಕುಮಾರ್, ಅಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಸೇರಿದಂತೆ ಇನ್ನು ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.


Click it and Unblock the Notifications











