ಬಿಗ್ ಬಾಸ್ ಸೀಸನ್ 11ಗೆ ಭರ್ಜರಿ ತಯಾರಿ; ಈ ಬಾರಿ ಬಿಗ್ ಬಾಸ್ ಮನೆಗೆ ಹೋಗ್ತಾರಾ ಪಾರು..?
ಮತ್ತೊಬ್ಬರ ಖಾಸಗೀ ಬದುಕಿನ ಮೇಲಿರೋ ಮನುಷ್ಯ ಸಹಜ ಕ್ಯೂರಿಯಾಸಿಟಿಯನ್ನೇ ಬಂಡವಾಳ ಮಾಡಿಕೊಂಡ ಬಿಗ್ ಬಾಸ್ ಕಾರ್ಯಕ್ರಮವನ್ನ ಜನ ಬೈದುಕೊಂಡೂ ನೋಡುತ್ತಾರೆ. ನೋಡುತ್ತಲೇ ಬೈಯುತ್ತಾರೆ.
ಇಂಥಾ ಕಾರ್ಯಕ್ರಮ ಕನ್ನಡದಲ್ಲಿ ಈಗ ಇನ್ನೊಮ್ಮೆ ಪ್ರಸಾರವಾಗಲಿದೆ. ಹನ್ನೊಂದನೇ ಸೀಸನ್‌ಗೆ ತೆರೆ ಮರೆಯಲ್ಲಿ ಕಸರತ್ತು ಆರಂಭವಾಗಿದೆ. ಇದಕ್ಕೆ ಪೂರಕವಾಗಿ ಈ ಬಾರಿ ಕನ್ನಡದ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲ ಕಾಲಿಡಬಹುದು ಎನ್ನುವ ಚರ್ಚೆ ಶುರುವಾಗಿದೆ. ಈ ಬಾರಿ ಬಿಗ್ ಬಾಸ್‌ನಲ್ಲಿ ಹೆಚ್ಚಾಗಿ ಕಿರುತೆರೆ ಕಲಾವಿದರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟಿವ್ ಇರುವವರನ್ನು ಸ್ಪರ್ಧಿಗಳ ಪಟ್ಟಿಯಲ್ಲಿ ಸೇರಿಸಲಾಗುತ್ತಿದ್ದು, ಈ ಪೈಕಿ ಕಿರುತೆರೆ ಕಲಾವಿದೆ ಪಾರು ಖ್ಯಾತಿಯ ಮೋಕ್ಷಿತಾ ಪೈ ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿದೆ.

ಇನ್ನೂ.. ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್ಬಾಸ್ ಮನೆ ಪ್ರವೇಶಕ್ಕೆ ಆಹ್ವಾನ ಹೋಗಿದ್ದು, ಅವರು ಕೂಡ ದೊಡ್ಮನೆಗೆ ಬರಲು ಸಜ್ಜಾಗುತ್ತಿದ್ದಾರೆ ಎನ್ನುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ.
ಹಾಗಂಥ ಹರಿದಾಡುತ್ತಿರುವ ಸುದ್ದಿ ಯಾವಾಗಲೂ ನಿಜಾ ಆಗಬೇಕು ಅಂತಲ್ಲ. ಯಾಕೆಂದರೆ.. ನಿಮಗೆ ಗೊತ್ತು, ಇದು ಸೋಶಿಯಲ್ ಮೀಡಿಯಾ ಕಾಲ. ಈ ಕಾಲದಲ್ಲಿ ಸತ್ಯಕ್ಕಿಂತ ಸುಳ್ಳಿಗೆ ಬೆಲೆ ಜಾಸ್ತಿ. ಹೀಗಾಗಿಯೇ.. ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯೂಸ್ ಫಸ್ಟ್ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಮೋಕ್ಷಿತಾ ಪೈ, ಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ ಅಂದಿದ್ದಾರೆ. ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲ ಎಂದಿದ್ದಾರೆ.

ಸದ್ಯಕ್ಕೆ ಮೋಕ್ಷಿತಾ ನಾನು ಬಿಗ್ ಬಾಸ್ ಮನೆಗೆ ಹೋಗ್ತಿಲ್ಲ ಎಂದು ಹೇಳಿದ್ದಾರೆ. ಯಾರಿಗೆ ಗೊತ್ತು.. ಮುಂದೆ ಬಿಗ್ ಬಾಸ್ ಇವರನ್ನು ಸಂಪರ್ಕ ಮಾಡಿದರು ಮಾಡಬಹುದು. ಆಗ ಮೋಕ್ಷಿತಾ ಮನಸು ಬದಲಾದರು ಬದಲಾಗಬಹುದು. ಬಿಗ್ ಬಾಸ್ ಹನ್ನೊಂದನೇ ಸೀಸನ್‌ನಲ್ಲಿ ನಾವು-ನೀವು ಮೋಕ್ಷಿತಾ ಪೈ ಅವರನ್ನು ನೋಡಿದರು ನೋಡಬಹುದು.
ಉಳಿದಂತೆ ಈ ಬಾರಿಯ ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

ಅಂದ್ಹಾಗೇ ಪ್ರತಿ ಬಾರಿ ಅಕ್ಟೋಬರ್ ತಿಂಗಳಲ್ಲಿ ಬಿಗ್ ಬಾಸ್ ಶೋ ಆರಂಭವಾಗುತ್ತೆ. ಅದರಂತೆ ಈ ಬಾರಿ ಕೂಡ ಅಕ್ಟೋಬರ್ ಮೂರನೇ ವಾರದಲ್ಲಿ ದೊಡ್ಡಾಟ ಶುರುವಾಗುವ ಸಾಧ್ಯತೆ ಇದೆ. ಇನ್ನೂ ಕಳೆದ ಸೀಸನ್‌ನಲ್ಲಿ ವಿವಾದ ಹೆಚ್ಚಾದರೂ ಜನಪ್ರಿಯತೆಯ ಗ್ರಾಫ್ ಏರಿತ್ತು. ಹೀಗಾಗಿ ಈ ಬಾರಿ ಕೂಡ ಭಿನ್ನ-ವಿಭಿನ್ನ ವ್ಯಕ್ತಿಗಳು ಈ ಶೋನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಳೆದ ಬಾರಿಯಂತೆ ಈ ಬಿಗ್ ಬಾಸ್ ಕೂಡ ಸದ್ದು ಮಾಡುವ ಲಕ್ಷಣ ಕಂಡು ಬರುತ್ತಿದೆ. ಕಲರ್ಸ್ ಕನ್ನಡ. ಈ ಬಾರಿ ಕೂಡ ಶೋ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗ್ತಿದೆ.


Click it and Unblock the Notifications











