By: Filmibeat Kannada Video Team
Published : December 07, 2017, 03:42

ನಿಖಿಲ್ ಕುಮಾರ್ ಮತ್ತು ರಚಿತಾ ರಾಮ್ ಇಬ್ಬರು ಈಗ ರಾಮ ಸೀತಾ

Subscribe to Filmibeat Kannada

ನಟಿ ರಚಿತಾ ರಾಮ್ ಸದ್ಯ ಸಿಕ್ಕಾಪಟ್ಟೆ ಬಿಜಿ ಇರುವ ನಟಿ. 'ಅಯೋಗ್ಯ' ಚಿತ್ರದಲ್ಲಿ ನೀನಾಸಂ ಸತೀಶ್ ಮತ್ತು 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾದಲ್ಲಿ ದುನಿಯಾ ವಿಜಯ್ ಜೊತೆ ರಚಿತಾ ಸದ್ಯ ನಟಿಸುತ್ತಿದ್ದಾರೆ. ಇದರ ಜೊತೆಗೆ ಇದೀಗ ಮತ್ತೊಂದು ಹೊಸ ಸಿನಿಮಾಗೆ ರಚಿತಾ ಆಯ್ಕೆ ಆಗಿದ್ದಾರೆ. ಈಗಾಗಲೇ ಕನ್ನಡದ ಬಹುತೇಕ ಸ್ಟಾರ್ ನಟರ ಜೊತೆ ರಚಿತಾ ತೆರೆ ಹಂಚಿಕೊಂಡಿದ್ದಾರೆ. ಆದರೆ ಈಗ ನಟ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾಗೆ ರಚಿತಾ ರಾಮ್ ನಾಯಕಿ ಆಗಿದ್ದಾರೆ. ನಿಖಿಲ್ ಸದ್ಯ 'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿಸಿದ್ದಾರೆ. ಅದರ ಬಳಿಕ ಅವರ ಹೊಸ ಚಿತ್ರ 'ಸೀತಾ ರಾಮ ಕಲ್ಯಾಣ' ಸಿನಿಮಾ ಕೆಲ ದಿನಗಳ ಹಿಂದೆ ಅಷ್ಟೇ ಸೆಟ್ಟಿರಿದ್ದು, ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿ ಆಗಿದ್ದಾರೆ.ನಿಖಿಲ್ ಕುಮಾರ್ ಅವರ ಹೊಸ ಚಿತ್ರ 'ಸೀತಾ ರಾಮ ಕಲ್ಯಾಣ' ಸಿನಿಮಾಗೆ ನಾಯಕಿಯ ಆಯ್ಕೆ ಆಗಿದೆ. ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ನಿಖಿಲ್ - ರಚಿತಾ ಇಬ್ಬರು ಒಂದೇ ಚಿತ್ರದಲ್ಲಿ ನಟಿಸಿದ್ದಾರೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !