Tap to Read ➤

ಜನವರಿ 26ರಂದು ಮೈಸೂರಿನಲ್ಲಿ ವಸಿಷ್ಠ ಸಿಂಹ-ಹರಿಪ್ರಿಯಾ ಸರಳ ವಿವಾಹ

ನಟ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳು 26ರಂದು ನಡೆಯಲಿದೆ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
sowmya malnad
ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಮದುವೆಗೆ ಡೇಟ್ ಫಿಕ್ಸ್ ಆಗಿದೆ.
ಹೊಸ ವರ್ಷದ ಹೊಸ್ತಿಲಲ್ಲಿಯೇ ನವ ಜೀವನಕ್ಕೆ ಕಾಲಿಡುವುದಕ್ಕೆ ಈ ಜೋಡಿ ಸಜ್ಜಾಗಿದೆ.
ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಈ ಜೋಡಿ ಡಿಸೆಂಬರ್ 3ರಂದು ನಿಶ್ವತಾರ್ಥವನ್ನು ಕೂಡ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ಮಾಡಿಕೊಂಡಿತ್ತು.
ಹೀಗಾಗಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ವಿವಾಹ ಅದ್ಧೂರಿಯಾಗಿರಲಿದೆ ಎಂದು ಫ್ಯಾನ್ಸ್ ಭಾವಿಸಿದ್ದರು.
ಆದ್ರೀಗ ಮದುವೆ ಕೂಡ ಸರಳವಾಗಿ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ಜನವರಿ 26ರಂದು ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದೆ ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
More