Tap to Read ➤

ಹೊಸ ವರ್ಷದಲ್ಲಿ 'ಸಿಂಹಪ್ರಿಯ' ಕಲ್ಯಾಣ: ಇಲ್ಲಿವೆ ಎಂಗೇಜ್‍ಮೆಂಟ್ ಫೋಟೋಗಳು

ಸ್ಯಾಂಡಲ್‌ವುಡ್‌ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಡಿಸೆಂಬರ್ 3ರಂದು ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇವರಿಬ್ಬರ ನಿಶ್ಚಿತಾರ್ಥದ ಫೋಟೋಗಳು ದೊರಕಿವೆ.
sowmya malnad
ನಟ ವಸಿಷ್ಠ ಹಾಗೂ ಹರಿಪ್ರಿಯಾ ಡಿಸೆಂಬರ್ 3ರಂದು ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ನಟಿ ಹರಿಪ್ರಿಯಾ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ನಡೆದಿತ್ತು.
ಎರಡು ಕುಟುಂಬದವರ ಸಮ್ಮುಖದಲ್ಲಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಉಂಗುರ ಬದಲಾಯಿಸಿಕೊಂಡಿದ್ದರು.
ಬಳಿಕ ವಸಿಷ್ಠ ಹಾಗೂ ಹರಿಪ್ರಿಯಾ ತಮ್ಮ ಪ್ರೀತಿಯ ವಿಷಯ ಬಹಿರಂಗಪಡಿಸಿದ್ದರು.
2023ರಲ್ಲಿ ಇವರಿಬ್ಬರ ಕಲ್ಯಾಣ ನಡೆಯಲಿದ್ದು, ಸದ್ಯ ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗುತ್ತಿದೆ.
ಇವರಿಬ್ಬರು ಆರು ವರ್ಷಗಳಿಂದ ಪರಿಚಿತರಾಗಿದ್ದು, ಸ್ನೇಹ ಪ್ರೀತಿಗೆ ತಿರುಗಿತ್ತು.
More