Tap to Read ➤

ಸದ್ದಿಲ್ಲದೇ ಎಂಗೇಜ್ ಆದ ನಟಿ ವೈಷ್ಣವಿ ಗೌಡ

ಕಿರುತೆರೆ ನಟಿ ವೈಷ್ಣವಿ ಗೌಡ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
sowmya malnad
ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕರ್ನಾಟಕದ ಮನೆ ಮಾತಾಗಿದ್ದ ವೈಷ್ಣವಿ ಗೌಡ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ವೈಷ್ಣವಿ ಗೌಡ ಅವರ ನಿಶ್ಚಿತಾರ್ಥದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಫೋಟೋದಲ್ಲಿ ಹುಡುಗನ ಪಕ್ಕದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಕೂಡ ಇದ್ದಾರೆ.
ವೈಷ್ಣವಿ ಗೌಡ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ನಟಿ ವೈಷ್ಣವಿ ಹೊಸ ಮನೆ ಖರೀದಿಸಿ, ಗೃಹಪ್ರವೇಶ ಮಾಡಿದ್ದರು.
ಇದರ ಬೆನ್ನಲ್ಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ.
ಆದರೆ, ಈ ಕುರಿತು ನಟಿ ವೈಷ್ಣವಿ ಯಾವುದೇ ಸ್ಪಷ್ಟನೆ ನೀಡಿಲ್ಲ.
More