Tap to Read ➤

ನಟಿ, ನಿರೂಪಕಿ ಅನುಪಮ ಗೌಡ ಕುರಿತ ಆಸಕ್ತಿಕರ ವಿಷಯಗಳು

ನಟಿ, ನಿರೂಪಕಿ ಅನುಪಮ ಗೌಡ ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 9ಗೆ ಪ್ರವೇಶ ಪಡೆದಿದ್ದು, ಅವರ ಕುರಿತ ಕೆಲ ಆಸಕ್ತಿಕರ ವಿಷಯಗಳು ಇಲ್ಲಿವೆ.
sowmya malnad
ನಟಿ, ನಿರೂಪಕಿ ಗುರುತಿಸಿಕೊಂಡಿರುವ ಅನುಪಮಾ ಗೌಡ, ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ಲಂಕೇಶ್ ಪತ್ರಿಕೆ ಸಿನಿಮಾ ಮೂಲಕ ಬಾಲ ಕಲಾವಿದೆಯಾಗಿ ಸ್ಯಾಂಡಲ್‌ವುಡ್‌ ಪ್ರವೇಶಿಸಿದರು.
ಅನುಪಮಾ ಗೌಡ ಚಿ ಸೌ ಸಾವಿತ್ರಿ ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು. ಆದರೆ, ಇದು ಅಷ್ಟು ಖ್ಯಾತಿ ತಂದು ಕೊಟ್ಟಿರಲಿಲ್ಲ. ನಂತರ 'ಅಕ್ಕ' ಧಾರಾವಾಹಿಯಲ್ಲಿ ದ್ವಿಪಾತ್ರ ನಿಭಾಹಿಸುವುದರ ಮೂಲಕ ಸೈ ಎನಿಸಿಕೊಂಡರು.
ಅನುಪಮ ಗೌಡ ಮಜಾ ಭಾರತ, ರಾಜ-ರಾಣಿ, ನನ್ನಮ್ಮ ಸೂಪರ್ ಸ್ಟಾರ್ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ವೀಕ್ಷಕರ ಗಮನ ಸೆಳೆದಿದ್ದಾರೆ.
ಅನುಪಮಾ 'ಆ ಕರಾಳ ರಾತ್ರಿ' ಚಿತ್ರದಲ್ಲಿ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಮತ್ತು ಆರ್‌ಜೆ ರೋಹಿತ್ ಅಭಿನಯದ ತ್ರಯಂಬಕಂ (2019) ಚಿತ್ರದಲ್ಲಿ ಪತ್ರಕರ್ತೆಯಾಗಿ ನಟಿಸಿದ್ದಾರೆ.
ಅನುಪಮಾ ಗೌಡ ಯುಟ್ಯೂಬ್ ಚಾನೆಲ್ ಮೂಲಕ ತಮ್ಮ ದಿನಚರಿ, ವೈಯಕ್ತಿಕ ಜೀವನದ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾರೆ.
ಅನುಪಮ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 5ರಲ್ಲಿ ಭಾಗವಹಿಸಿದ್ದರು. ಇದೀಗ ಎರಡನೇ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 9ಗೆ ಎಂಟ್ರಿ ಕೊಟ್ಟಿದ್ದಾರೆ.
More