Tap to Read ➤

ಕನ್ನಡದ ಮತ್ತೊಂದು ಚಿತ್ರದಲ್ಲಿ ಸಂಜಯ್ ದತ್!

ಕೆಜಿಎಫ್ ಭಾಗ 2ರಲ್ಲಿ ಅಧೀರ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ಸಂಜಯ್ ದತ್ ಕನ್ನಡದ ಮತ್ತೊಂದು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ
Shivam
ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದೆ.
ಈ ಕನ್ನಡ ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್ ದತ್ ಮುಖಕ್ಕೆ ಬಣ್ಣ ಹಚ್ಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಾರಿ ಸಂಚಲನ ಮೂಡಿಸಿದೆ.
ಕೆವಿಎನ್ ಪ್ರೋಡಕ್ಷನ್ ನಿರ್ಮಿಸುತ್ತಿರುವ ಪ್ಯಾನ್-ಇಂಡಿಯಾ ಚಿತ್ರದ ತಯಾರಿ ಕಾರ್ಯ ಭರದಿಂದ ಸಾಗುತ್ತಿದೆ
ಹಿರಿಯ ನಟ ತಾರಾಗಣಕ್ಕೆ ಸೇರುವ ಬಗ್ಗೆ ಅಧಿಕೃತ ಮಾಹಿತಿ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.
ನಿರ್ದೇಶಕ ಪ್ರೇಮ್‌ ಅವರು ಮುನ್ನಾ ಭಾಯ್ ಅವರನ್ನು ಭೇಟಿಯಾಗಿರುವುದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಸಿನಿ ತಂಡ ಟೈಟಲ್ ಟೀಸರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಧ್ರುವ ಸರ್ಜಾ ಅವರು ನವೆಂಬರ್‌ನಲ್ಲಿ ಪ್ರೇಮ್ ಅವರ ಮುಂದಿನ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.
Read more