Tap to Read ➤

ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ಸ್ಟಾರ್ ನಟರ ಮಕ್ಕಳು

ಉಪೇಂದ್ರ, ಗಣೇಶ್, ಪ್ರೇಮ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಮಕ್ಕಳು ಈಗಿನಿಂದಲೇ ಬಣ್ಣದ ಲೋಕದ ಜೊತೆ ನಂಟು ಬೆಳಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ, ಯಾವೆಲ್ಲಾ ಸ್ಟಾರ್ ನಟರ ಮಕ್ಕಳು ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
sowmya malnad
ಗೋಲ್ಡನ್ ಸ್ಟಾರ್ ಗಣೇಶ ಮಗಳು 'ಚಮಕ್' ಸಿನಿಮಾದಲ್ಲಿ ಸಣ್ಣದೊಂದು ಪಾತ್ರ ನಿರ್ವಹಿಸುವ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಮಗ ವಿಹಾನ್ ಕೂಡ ಸಖತ್ ಹಾಗೂ ಗಾಳಿಪಟ-2 ಸಿನಿಮಾದಲ್ಲಿ ನಟಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪುತ್ರ ವಿನೀಶ್ ಈ ಹಿಂದೆ ದರ್ಶನ್ ಅಭಿನಯದ 'ಮಿಸ್ಟರ್ ಐರಾವತ' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ಡೈಮಂಡ್ ಸ್ಟಾರ್ ಶ್ರೀನಗರ ಕಿಟ್ಟಿ ಮತ್ತು ಭಾವನಾ ದಂಪತಿಯ ಮುದ್ದು ಮಗಳು ಪರಿಣಿತಾ, ಶಿವರಾಜ್ ಕುಮಾರ್ ಅಭಿನಯದ 'ಮಾಸ್ ಲೀಡರ್' ಚಿತ್ರದಲ್ಲಿ ಶಿವಣ್ಣನ ಮಗಳ ಪಾತ್ರದಲ್ಲಿ ಮೋಡಿ ಮಾಡಿದ್ದರು.
ದುನಿಯಾ ವಿಜಯ್ ಅವರ ಮಗ ಸಾಮ್ರಾಟ್ ವಿಜಿ ಅಭಿನಯಿಸಲಿರುವ 'ಕುಸ್ತಿ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶ ಮಾಡಿದ್ದಾರೆ.
ಲವ್ಲಿ ಸ್ಟಾರ್ ಪ್ರೇಮ್ ಅವರ ಮಗ ಏಕಾಂತ್, ಮಾಮು ಟೀ ಅಂಗಡಿ, ಸಾಹೇಬ, ರಾಮರಾಜ್ಯ-ಗಾಂಧಿ ತಾತನ ಕನಸು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ 'ಗುರು ಶಿಷ್ಯರು' ಸಿನಿಮಾದಲ್ಲೂ ನಟಿಸಿದ್ದಾರೆ.
ಮಾಸ್ಟರ್ ಆನಂದ್ ಮಗಳಾದ ವಂಶಿಕಾ ಅಂಜನಿ ಕಶ್ಯಪ ನನ್ನಮ್ಮ ಸೂಪರ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಶೋನಲ್ಲಿ ಎಲ್ಲರ ಗಮನಸೆಳೆದಿದ್ದರು. ಇದೀಗ ವಸಿಷ್ಠ ಸಿಂಹ ನಟನೆಯ 'ಲವ್ ಲೀ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಉಪೇಂದ್ರ ಮತ್ತು ಪ್ರಿಯಾಂಕಾ ದಂಪತಿಯ ಮುದ್ದು ಮಗಳು ಐಶ್ಚರ್ಯ ಅಮ್ಮನ ಜೊತೆ ಅಭಿನಯಿಸಿದ್ದಾರೆ. ಪ್ರಿಯಾಂಕಾ ಅವರ 'ಹೌರಾ ಬ್ರಿಡ್ಜ್' ಚಿತ್ರದಲ್ಲಿ ಪ್ರಿಯಾಂಕಾ ಅವರ ಮಗಳ ಪಾತ್ರದಲ್ಲಿ ಐಶ್ವರ್ಯ ಬಣ್ಣ ಹಚ್ಚಿದ್ದಾರೆ.