Tap to Read ➤

'ಕಾಂತಾರ' ಸಿನಿಮಾದಲ್ಲಿ ಫಾರೆಸ್ಟ್ ಗಾರ್ಡ್ ಆದ ಸಪ್ತಮಿ ಗೌಡ

ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಸಪ್ತಮಿ ಗೌಡ, ಇದೀಗ ರಿಷಬ್ ಶೆಟ್ಟಿ ಅವರ 'ಕಾಂತಾರ' ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
sowmya malnad
ಬೆಂಗಳೂರಿನವರಾದ ಸಪ್ತಮಿ ಗೌಡ, ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ.ಉಮೇಶ್ ಅವರ ಪುತ್ರಿ.
ಸಪ್ತಮಿ ಗೌಡ ನಟನೆ ಮಾತ್ರವಲ್ಲದೆ, ರಾಷ್ಟ್ರೀಯ ಮಟ್ಟದ ಈಜುಗಾರ್ತಿಯಾಗಿ ಕೂಡ ಹೆಸರು ಮಾಡಿದ್ದಾರೆ.
ಇವರು ದುನಿಯಾ ಸೂರಿ ನಿರ್ದೇಶನದ, ಡಾಲಿ ಧನಂಜಯ್ ಅಭಿನಯದ ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.
ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿ ಗಿರಿಜಾ ಪಾತ್ರದ ಮೂಲಕ ಪರಿಚಯರಾದ ಸಪ್ತಮಿ ಗೌಡ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ 'ಕಾಂತಾರ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿ ಗಿರಿಜಾ ಪಾತ್ರದ ಮೂಲಕ ಪರಿಚಯರಾದ ಸಪ್ತಮಿ ಗೌಡ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ 'ಕಾಂತಾರ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಕಾಂತಾರ ಸಿನಿಮಾದಲ್ಲಿರಿಷಬ್​ ಶೆಟ್ಟಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ಸಪ್ತಮಿ ಗೌಡ, ಸಿಂಗಾರ ಸಿರಿಯೇ ಹಾಡಿನ ಮೂಲಕ ಈಗಾಗಲೇ ಕನ್ನಡಿಗರ ಮನ ಗೆದ್ದಿದ್ದಾರೆ.
ಮಂಗಳೂರಿನ ಕಂಬಳ ಓಟದ ಕಥೆ ಹೇಳುವ ಚಿತ್ರ ಇದಾಗಿದ್ದು, ಸೆಪ್ಟೆಂಬರ್ 30ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ.
more