Tap to Read ➤

ಸಪ್ತಪದಿ ತುಳಿಯಲು ಸಜ್ಜಾದ 'ಸತ್ಯ' ಧಾರಾವಾಹಿ ಖ್ಯಾತಿಯ ಸಾಗರ್

ಸತ್ಯ ಧಾರಾವಾಹಿಯಲ್ಲಿ ಅಮುಲ್ ಬೇಬಿಯಾಗಿ ಮಿಂಚುತ್ತಿರುವ ಸಾಗರ್ ಗೌಡ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
sowmya malnad
ಕಿರುತೆರೆಯ ನಂಬರ್ ಒನ್ ಧಾರಾವಾಹಿಯಾದ 'ಸತ್ಯ'ದಲ್ಲಿ ಕಾರ್ತಿಕ್ ಪಾತ್ರಧಾರಿಯಾಗಿ ಅಭಿಮಾನಿಗಳ ಮನಗೆದ್ದ ನಟ ಸಾಗರ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ನಟ ಸಾಗರ್ ಗೌಡ 'ಸತ್ಯ' ಧಾರಾವಾಹಿಯಲ್ಲಿ ಅಮುಲ್ ಬೇಬಿ ಎಂದೇ ಫೇಮಸ್ ಆಗಿದ್ದರು.
ಇದೀಗ ಅವರು ನಟಿ, ಕಮ್ ಮಾಡೆಲ್ ಸಿರಿ ರಾಜು ಅವರನ್ನು ಪ್ರೀತಿಸಿ ಮದುವೆಯಾಗುತ್ತಿದ್ದಾರೆ.
ಸದ್ಯದಲ್ಲೇ ಬೆಂಗಳೂರಿನಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದು, ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ.
ಸಾಕಷ್ಟು ಸಮಯದಿಂದ ಸಾಗರ್ ಮತ್ತು ಸಿರಿ ರಾಜು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು.
ಸಾಗರ್ ಗೌಡ ಮತ್ತು ಸಿರಿ ಇದೀಗ ತಾವು ದಾಂಪತ್ಯ ಜೀವನಕ್ಕೆ ಕಾಲಿಡುವ ಸುದ್ದಿಯನ್ನ ತಿಳಿಸಿದ್ದಾರೆ.
ಸಿರಿ ರಾಜು ಕೂಡ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದಾರೆ.
More